ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ಯಾಕ್ಸ್ ರಿಟರ್ನ್ ಸಲ್ಲಿಕೆಗೆ ಆಧಾರ್ ಕಡ್ಡಾಯ; ತೀರ್ಪು ಕಾಯ್ದಿರಿಸಿದ ಸುಪ್ರೀಂ

ಆದಾಯ ತೆರಿಗೆ ಸಲ್ಲಿಕೆಗೆ ಆಧಾರ್ ಲಿಂಕ್ ಮಾಡುವುದಕ್ಕಾಗಿ ಐಟಿ ಕಾಯ್ದೆಗೆ ಸೆಕ್ಷನ್ 139 ಎಎ ಸೇರ್ಪಡೆಗೊಳಿಸಿದ್ದನ್ನು ಪ್ರಶ್ನಿಸಿ ಕೇರಳದ ಕಮ್ಯುನಿಸ್ಟ್ ಪಕ್ಷದ ನಾಯಕ ಬಿನೋಯ್ ವಿಶ್ವಂ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

By ಅನುಷಾ ರವಿ
|
Google Oneindia Kannada News

ನವದೆಹಲಿ, ಮೇ 4: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಆಧಾರ್ ಕಾರ್ಡ್ ಕಡ್ಡಾಯ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ಕಾಯ್ದಿರಿಸಿದೆ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಆಧಾರ ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಗುರುವಾರಕ್ಕೆ ಕಾಯ್ದಿರಿಸಿದೆ.

'Mandatory' Aadhaar: Supreme Court reserves judgement

ಆದಾಯ ತೆರಿಗೆಗೆ ಆಧಾರ್ ಲಿಂಕ್ ಮಾಡುವುದಕ್ಕಾಗಿ ಐಟಿ ಕಾಯ್ದೆಗೆ ಸೆಕ್ಷನ್ 139 ಎಎ ಸೇರ್ಪಡೆಯನ್ನು ಪ್ರಶ್ನಿಸಿ ಕೇರಳದ ಕಮ್ಯುನಿಸ್ಟ್ ಪಕ್ಷದ ನಾಯಕ ಬಿನೋಯ್ ವಿಶ್ವಂ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

"ಆದಾಯ ತೆರಿಗೆ ಕಾಯ್ದೆಗೆ ಸೆಕ್ಷನ್ 139ಎಎ ಸೇರಿಸಿರುವುದರಿಂದ ನಾನು ಅನಿವಾರ್ಯವಾಗಿ ಆಧಾರ್ ಪಡೆದುಕೊಳ್ಳಬೇಕಾಗಿದೆ. ಇದರಿಂದ ಸಂವಿಧಾನದ ಆರ್ಟಿಕಲ್ 21ರಲ್ಲಿ ನನಗೆ ನೀಡಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಲಿದೆ," ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು. (ಒನ್ ಇಂಡಿಯಾ ಸುದ್ದಿ)

English summary
The Supreme Court on Thursday reserved its verdict in a PIL challenging compulsory Aadhaar for filing income tax returns. While arguments over the constitutional validity of section 139 AA of income tax act concluded, the court has reserved its verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X