ಮಣಿಪುರ: ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಬಿಜೆಪಿ ಮಾಸ್ಟರ್ ಪ್ಲಾನ್
ಮಣಿಪುರದಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಲು ಬಿಜೆಪಿ ಪಣತೊಟ್ಟಿದೆ. ಇದಕ್ಕೆ ಬೇಕಾದ ಶತ ಪ್ರಯತ್ನಗಳನ್ನು ಅದು ಜಾರಿಯಲ್ಲಿಟ್ಟಿದೆ.
ಬೆಂಗಳೂರು, ಮಾರ್ಚ್ 2: ಮಣಿಪುರದಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಲು ಬಿಜೆಪಿ ಪಣತೊಟ್ಟಿದೆ. ಇದಕ್ಕೆ ಬೇಕಾದ ಶತ ಪ್ರಯತ್ನಗಳನ್ನು ಅದು ಜಾರಿಯಲ್ಲಿಟ್ಟಿದೆ.
ಮಾರ್ಚ್ 4 ಮತ್ತು 8 ರಂದು ಮಣಿಪುರದಲ್ಲಿ ಚುನಾವಣೆ ನಡೆಯಲಿದ್ದು ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ವತಃ ಮನೆ ಮನೆಗೆ ಹೋಗಿ ಪ್ರಚಾರ ನಡೆಸುತ್ತಿದ್ದಾರೆ. [20 ಕಿ.ಮೀ ಸೈಕಲ್ ಏರಿ ಬಂದ ಶರ್ಮಿಳಾಗೆ ಕೇಜ್ರಿವಾಲ್ ಕೊಟ್ರು 50,000]

ಶಾ ಮಾತ್ರವಲ್ಲದೆ ಬಿಜೆಪಿಯ ಹಲವು ನಾಯಕರು ತೌಬಾಲ್ ಜಿಲ್ಲೆಯಲ್ಲಿ ಮನೆ ಮನೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ತೌಬಾಲ್ ನಲ್ಲಿ 10 ಕ್ಷೇತ್ರಗಳಿದ್ದು ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಸಿಂಗ್ ಭದ್ರಕೋಟೆಯಾಗಿದೆ. ಇಬೋಬಿ ಭದ್ರ ಕೋಟೆಯನ್ನೇ ಒಡೆದರೆ ಗೆಲುವು ಸುಲಭವಾಗಿ ಧಕ್ಕಬಹುದು ಎಂದು ಬಿಜೆಪಿ ಅಂದುಕೊಂಡಿದೆ.
ಚುನಾವಣಾ ಪ್ರಚಾರದ ವೇಳೆಯಲ್ಲಿ ಮಣಿಪುರದಲ್ಲಿ ಬದಲಾವಣೆಗಾಗಿ ಬಿಜೆಪಿಗೆ ಮತ ನೀಡಿ ಎಂದು ಅಮಿತ್ ಶಾ ಹೇಳಿದ್ದಾರೆ. ಮನೆ ಮನೆಗೆ ಹೋಗಿ ಬಿಜೆಪಿಯ ಭವಿಷ್ಯದ ಯೋಜನೆಗಳ ಕರಪತ್ರಗಳನ್ನು ಅವರು ಹಂಚುತ್ತಿದ್ದಾರೆ.
ಇದೇ ಮೊದಲ ಬಾರಿಗೆ ಕಾಂಗ್ರೆಸಿನ ಭದ್ರ ಕೋಟೆಯಾಗಿದ್ದ ಮಣಿಪುರದಲ್ಲಿ ಬಿಜೆಪಿ ಭಾರೀ ಪ್ರಚಾರದೊಂದಿಗೆ ಚುನಾವಣಾ ಕಣಕ್ಕಿಳಿದಿದೆ. ಇಲ್ಲಿ 16 ವರ್ಷಗಳ ಹೋರಾಟ ಕೊನೆಗೊಳಿಸಿ ಉಕ್ಕಿನ ಮಹಿಳೆ ಇರೋಮ್ ಶರ್ಮಿಳಾ ಕೂಡಾ ಕಣಕ್ಕಿಳಿದಿದ್ದಾರೆ. ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬುದು ಮಾರ್ಚ್ 11ರಂದು ಗೊತ್ತಾಗಲಿದೆ. [ಬಿಜೆಪಿಯಿಂದ ಸ್ಪರ್ಧಿಸುವಂತೆ 36 ಕೋಟಿ ರುಪಾಯಿ ಆಮಿಷ: ಶರ್ಮಿಳಾ]
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications