ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಬ್ಬಕ್ಕೂ ಮುನ್ನ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

By Mahesh
|
Google Oneindia Kannada News

ನವದೆಹಲಿ, ಸೆ. 09: ಗೌರಿ ಗಣೇಶ ಹಬ್ಬಕ್ಕೂ ಮುನ್ನ ಕೇಂದ್ರ ಸರಕಾರಿ ನೌಕರರ ಬಾಯಿಗೆ ನರೇಂದ್ರ ಮೋದಿ ಸರ್ಕಾರ ಲಡ್ಡು ಹಾಕಿದೆ. ಸುಮಾರು 1 ಕೋಟಿಗೂ ಅಧಿಕ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಎನ್ ಡಿಎಸ್ ಸರ್ಕಾರ ಶೇ 6 ರಷ್ಟು ತುಟ್ಟಿಭತ್ಯೆ(DA) ಘೋಷಿಸಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ಶೇ 6 ರಷ್ಟು ತುಟ್ಟಿಭತ್ಯೆ ಹೆಚ್ಚಳ ಪ್ರಸ್ತಾವನೆಗೆ ಮೋದಿ ಅವರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಶೇ 6 ರಿಂದ ಶೇ 119 ರ ತನಕ ತುಟ್ಟಿಭತ್ಯೆ ಏರಿಕೆ ಮಾಡಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ತುಟ್ಟಿಭತ್ಯೆಯನ್ನು ಮೂಲ ವೇತನ (Basic Pay) ಶೇ 6 ರಿಂದ ಶೇ 113ರಷ್ಟು ಹೆಚ್ಚಳ ಮಾಡಲಾಗಿತ್ತು. ಕಳೆದ ಜನವರಿಯಿಂದ ಅನ್ವಯವಾಗಿತ್ತು.

ಈ ಬಾರಿಯ ತುಟ್ಟಿ ಭತ್ಯೆ ಏರಿಕೆ ಜುಲೈ 1 ರಿಂದ ಅನ್ವಯವಾಗಲಿದೆ. 6ನೇ ವೇತನ ಆಯೋಗದ ಶಿಪಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ತುಟ್ಟಿಭತ್ಯೆ ಏರಿಕೆ ಮಾಡಲಾಗಿದೆ. 48 ಲಕ್ಷ ಸರ್ಕಾರಿ ಉದ್ಯೋಗಿಗಳು ಹಾಗೂ 55 ಲಕ್ಷ ಪಿಂಚಣಿದಾರರು ಈ ತುಟ್ಟಿ ಭತ್ಯೆ ಪಡೆಯಲಿದ್ದಾರೆ.

Modi led NDA Cabinet gives nod to 6 per cent hike in dearness allowance
ತುಟ್ಟಿ ಭತ್ಯೆ(dearness allowance): ತುಟ್ಟಿ ಭತ್ಯೆಯನ್ನು 12 ತಿಂಗಳಿನ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇರೆಗೆ ನಿಗದಿಪಡಿಸಲಾಗುತ್ತದೆ. ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ.

ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

ಮನಮೋಹನ್ ಸಿಂಗ್ ಅವರ ಯುಪಿಎ 2 ಸರ್ಕಾರ ವೇತನ ಮತ್ತು ನಿವೃತ್ತಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗವನ್ನು ಕೇಂದ್ರದ ಯುಪಿಎ ಸರ್ಕಾರ ಪ್ರಕಟ ಮಾಡಿತ್ತು. ಮೋದಿ ಅವರ ಸರ್ಕಾರ ಇನ್ನೂ 7ನೇ ವೇತನ ಆಯೋಗ ಜಾರಿಗೊಳಿಸಬೇಕಿದೆ.

English summary
The Cabinet on Wednesday(Sept 09) gave green signal to Government's proposal of 6 per cent dearness allowance(DA). It has been decided that DA of all the central Government employees will be increased to 119 per cent from 113 per cent.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X