ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮುವಿನಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ

|
Google Oneindia Kannada News

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ಭಾನುವಾರ ಅಸ್ತಿತ್ವಕ್ಕೆ ಬಂದಿದೆ. ಪಿಡಿಪಿಯ ಮುಖ್ಯಸ್ಥ ಮುಫ್ತಿ ಮೊಹಮ್ಮದ್ ಸಯ್ಯದ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಿಜೆಪಿಯ ನಿರ್ಮಲ್ ಕುಮಾರ್ ಸಿಂಗ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಸಚಿವೆಯಾಗಿ ಪ್ರಿಯಾ ಸೇಠಿ ಸಹ ಪ್ರಮಾಣ ತೆಗೆದುಕೊಂಡಿದ್ದು ಒಟ್ಟು 25 ಜನ ಮಂತ್ರಿಗಳ ಸಂಪುಟ ಅಸ್ತಿತ್ವಕ್ಕೆ ಬಂದಿದೆ.[ಕಾಶ್ಮೀರದಲ್ಲಿ ಕೇಸರಿಯ ರಂಗೋರಂಗು!]

india

ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಜಮ್ಮು ಜಾಶ್ಮೀರದ ಆಡಳಿತದಲ್ಲಿ ಬಿಜೆಪಿ ಭಾಗವಾಗುತ್ತಿದೆ. ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡು 49 ದಿನ ಕಳೆದಿದ್ದರೂ ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆಯಾಗಿರಲಿಲ್ಲ. ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದ ರಾಜ್ಯದಲ್ಲಿ ಇದೀಗ ಎಲ್ಲ ಗೊಂದಲಗಳೂ ಬಗೆ ಹರಿದಿವೆ.

ನರೇಂದ್ರ ಮೋದಿ ಉಪಸ್ಥಿತಿ
ಮುಫ್ತಿ ಮೊಹಮದ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದರು. ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

English summary
Ending 49-days of Governor's rule, Peoples Democratic Party (PDP) patron Mufti Muhammad Sayeed was sworn in as the new chief minister of Jammu and Kashmir on March 1, Sunday in the presence of Prime Minister Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X