ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಚುನಾವಣೆ: ಮೋದಿ ಸಮ್ಮುಖದಲ್ಲಿ ಕೋವಿಂದ್ ನಾಮಪತ್ರ ಸಲ್ಲಿಕೆ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಜೂನ್ 23: ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಎನ್ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಎನ್ಡಿಎ ಮೈತ್ರಿಕೂಟ ರಾಷ್ಟ್ರಪತಿ ಚುನಾವಣೆಗೆ ರಾಮ್ ನಾಥ್ ಕೋವಿಂದ್ ರನ್ನು ಅಭ್ಯರ್ಥಿಯನ್ನಾಗಿ ಆರಿಸಿತ್ತು. ಇದೀಗ ವಿಪಕ್ಷಗಳೂ ಗುರುವಾರ ತಮ್ಮಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿರುವುದರಿಂದ ಚುನಾವಣೆ ನಡೆಯುವುದು ಖಚಿತವಾಗಿದೆ.

Next President of India: Kovind to file nomination in presence of Modi

ವಿಪಕ್ಷಗಳ ಕಡೆಯಿಂದ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಸ್ಪೀಕರ್ ಮೀರಾ ಕುಮಾರ್ ಕಣಕ್ಕಿಳಿಯಲಿದ್ದಾರೆ. ಆದರೆ ಮತಗಳ ಲೆಕ್ಕಾಚಾರದಲ್ಲಿ ಅವರು ಗೆಲ್ಲುವ ಸಾಧ್ಯತೆಗಳು ಮಾತ್ರ ವಿರಳವಾಗಿವೆ.

ಜೂನ್ 28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 17ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಎಲ್ಲಾ ಸಂಸದರು ಮತ್ತು ರಾಜ್ಯಗಳ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

English summary
Ram Nath Kovind will file his nomination papers today for the next President of India elections. The NDA's candidate Kovind will file his nomination papers in the presence of Prime Minister Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X