ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್ನಾರೈಗಳಿಗೆ ಮತದಾನದ ಹಕ್ಕು, ಮೋದಿ ಸರ್ಕಾರದ ವಿಕ್ರಮ

By Mahesh
|
Google Oneindia Kannada News

ನವದೆಹಲಿ, ಜ.12: ಸುಪ್ರೀಂಕೋರ್ಟ್ ನಿರ್ದೇಶನದಂತೆ ಅನಿವಾಸಿ ಭಾರತೀಯ(ಎನ್ನಾರೈ)ರಿಗೆ ಮತದಾನದ ಹಕ್ಕನ್ನು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಘೋಷಿಸಿದೆ. ಕೇಂದ್ರ ಚುನಾವಣೆ ಆಯೋಗ ಕೂಡಾ ಈ ಬಗ್ಗೆ ಶಿಫಾರಸ್ಸು ಮಾಡಿತ್ತು.

ಅನಿವಾಸಿ ಭಾರತೀಯರು ಇನ್ಮುಂದೆ ವಿದೇಶದಲ್ಲಿದ್ದುಕೊಂಡೇ ಭಾರತದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ ಚಲಾಯಿಸಬಹುದು. ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಇ-ಬ್ಯಾಲೆಟ್ ವ್ಯವಸ್ಥೆ ಕಲ್ಪಿಸುತ್ತಿದೆ. ಕೇಂದ್ರ ಚುನಾವಣಾ ಆಯೋಗ ಮಾಡಿದ್ದ ಶಿಫಾರಸನ್ನು ಒಪ್ಪಿಕೊಂಡು ಇ ಬ್ಯಾಲೆಟ್ ಬಳಸುವುದಾಗಿ ಸುಪ್ರೀಂಕೋರ್ಟಿಗೆ ಕೇಂದ್ರ ಸರ್ಕಾರ ಮಾಹಿತಿ ಸಲ್ಲಿಸಿದೆ.

ಕೇಂದ್ರ ಸರ್ಕಾರದ ಮಾಹಿತಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ಮುಂದಿನ 8 ವಾರಗಳಲ್ಲಿ ಎನ್ನಾರೈಗಳೀಗೆ ಇ-ವೋಟಿಂಗ್ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. [ಅನಿವಾಸಿ ಭಾರತೀಯರಿಗೆ ನರೇಂದ್ರ ಮೋದಿ ಅಭಯ]

Modi govt accepts EC recommendation

ಭಾರತದಲ್ಲಿ ನಡೆಯಲಿರುವ ಎಲ್ಲ ಹಂತದ ಚುನಾವಣೆಗಳಲ್ಲೂ ಎನ್ನಾರೈಗಳು ಮತದಾನ ಮಾಡುವ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಚುನಾವಣಾ ಆಯೋಗ ಹಾಲಿ ಇರುವ ಕಾನೂನಿಗೆ ತಿದ್ದುಪಡಿ ಮಾಡಲು ಮುಂದಾಗಿದೆ.

ಈಗಾಗಲೇ 2010ರಲ್ಲಿ ಜನಪ್ರತಿನಿಧಿ ಹಕ್ಕು ಕಾಯ್ದೆಗೆ ಸಂಸತ್ತಿನ ಉಭಯ ಸದನಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಭಾರತದ ಎಲ್ಲ ಚುನಾವಣೆಗಳಲ್ಲೂ ಮತದಾನದ ಹಕ್ಕು ನೀಡಲು ಈ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. ಈ ಹೊಸ ವ್ಯವಸ್ಥೆಯಿಂದ ವಿವಿಧ ದೇಶಗಳಲ್ಲಿರುವ ಸುಮಾರು 11 ಮಿಲಿಯನ್ ಭಾರತೀಯರು ಮತದಾನದ ಹಕ್ಕನ್ನು ಪಡೆಯಲಿದ್ದಾರೆ.

ಕಳೆದ ತಿಂಗಳು ಪ್ರವಾಸಿ ಭಾರತ್ ದಿವಸ್ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಅನಿವಾಸಿ ಭಾರತೀಯರಿಗೆ ಜ.15ರ ನಂತರ ಜಾರಿಗೆ ಬರುವಂತೆ ಮತದಾನದ ಹಕ್ಕು ನೀಡಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದರು.

ಆಯಾ ದೇಶಗಳಲ್ಲಿರುವ ರಾಯಭಾರಿ ಕಚೇರಿಗಳಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸುವುದು, ಇ ಪೋಸ್ಟಲ್ ಬ್ಯಾಲೆಟ್, ಇ ವೋಟಿಂಗ್ ಸೇರಿದಂತೆ ಹಲವಾರು ಸಾಧ್ಯತೆಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ವಿಎಸ್ ಸಂಪತ್ ಅವರು ವಿದೇಶಾಂಗ ಇಲಾಖೆ ಜೊತೆ ಸಭೆ ನಡೆಸಿ ಚರ್ಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Non-Resident Indians will soon have e-voting rights,The central government has sent a letter to the Supreme Court stating that it has accepted ‘in letter and spirit’ the Election Commission’s suggestion to extend voting rights to NRIs through postal ballots.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X