ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ದೇಶದಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಅಪ್ರಸ್ತುತ'

|
Google Oneindia Kannada News

ಬೆಂಗಳೂರು, ಮೇ 20 : 'ದೇಶಕ್ಕೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅಪ್ರಸ್ತುತ. ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸಿಕ್ಕ ಜನ ಮನ್ನಣೆ' ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಗುರುವಾರ ನವದೆಹಲಿಯ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 'ಸದ್ಯ ದೇಶದ 9 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ಅಷ್ಟು ಮಾತ್ರವಲ್ಲದೆ ಕಳೆದ ಎರಡು ವರ್ಷಗಳಲ್ಲಿ ನಡೆದ ಎಲ್ಲ ಚುನಾವಣೆಗಳಲ್ಲಿಯೂ ಬಿಜೆಪಿ ತನ್ನ ಮತಗಳಿಗೆ ಪ್ರಮಾಣವನ್ನು ಹೆಚ್ಚಿಸಿಕೊಂಡಿದೆ' ಎಂದರು. [ಸೋಲೊಪ್ಪಿಕೊಂಡ ರಾಹುಲ್ ರನ್ನು ಕಿಚಾಯಿಸಿದ ಟ್ವೀಟ್ಸ್]

ananth kumar

'ತಮಿಳುನಾಡು, ಪಾಂಡಿಚೇರಿಗಳಲ್ಲಿಯೂ ನಮ್ಮ ಶೇಕಡಾವಾರು ಮತ ಪ್ರಮಾಣ ಹೆಚ್ಚಳವಾಗಿದೆ. ಕೇರಳದಲ್ಲಿ ಒಂದು ಕ್ಷೇತ್ರವನ್ನು ಗೆಲ್ಲುವುದರೊಂದಿಗೆ ನಾವು ಐತಿಹಾಸಿಕ ಸಾಧನೆ ಮಾಡಿದ್ದೇವೆ' ಎಂದು ಅನಂತ್ ಕುಮಾರ್ ಬಣ್ಣಿಸಿದ್ದಾರೆ. [ಜಯಮ್ಮನ 1 ರು. ಇಡ್ಲಿ ಸಾಂಬಾರಿಗೆ ಮರುಳಾದ ಮತದಾರರು]

'ಬಿಜೆಪಿಯ ಅಭಿವೃದ್ಧಿ ಪರ ಯೋಜನೆಗಳಿಗೆ ತಡೆ ನೀಡುವ, ನಕಾರಾತ್ಮಕ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್‍ಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ ದುರಾಡಳಿತ ಮತ್ತು ಭ್ರಷ್ಟಾಚಾರದ ಸಂಕೇತ ಎಂದು ಜನ ಭಾವಿಸಿದ್ದು ಆ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ' ಎಂದು ಅನಂತ್ ಕುಮಾರ್ ಹೇಳಿದರು. ['ಕಾಂಗ್ರೆಸ್ ಸೋಲಿಗೆ ರಾಹುಲ್ ಗಾಂಧಿ ಕಾರಣರಲ್ಲ']

ಗುರುವಾರ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು , ಅಸ್ಸಾಂನಲ್ಲಿ ಸತತ ಮೂರು ಅವಧಿಗೆ ಆಡಳಿತ ನಡೆಸಿದ್ದ ಕಾಂಗ್ರೆಸ್‌ ಪಕ್ಷವನ್ನು ಬಿಜೆಪಿ ಮಣಿಸಿದೆ. ತಮಿಳುನಾಡಿನಲ್ಲಿ ಎರಡನೇ ಅವಧಿಗೆ ಜಯಲಲಿತಾ ಅಧಿಕಾರ ಪಡೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಗೆಲುವಿನ ನಗೆ ಬೀರಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಕಾಂಗ್ರೆಸ್ ಡಿಎಂಕೆ ಜೊತೆ ಸೇರಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯುವಷ್ಟು ಸ್ಥಾನಗಳನ್ನು ಗಳಿಸಿದೆ. ಕೇರಳದಲ್ಲಿ ಎಸ್.ಅಚ್ಯುತಾನಂದನ್ ನೇತೃತ್ವದ ಎಲ್‌ಡಿಎಫ್ (ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್) ಸ್ಪಷ್ಟ ಬಹುಮತ ಪಡೆದಿದೆ.

English summary
Election results of 5 states show that a strong foundation of BJP has been laid for ensuring victory in 2019 Lok Sabha polls. People have rejected Congress said, Minister of Chemicals and Fertilizers Ananth Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X