ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಹಿಳೆಯರು: ತನಿಖೆಗೆ ಆದೇಶ

ಇತ್ತೀಚೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರು ನಿಂತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಬಗ್ಗೆ ಕೇರಳ ಸರ್ಕಾರ ತನಿಖೆ ನಡೆಸುವಂತೆ ಆದೇಶಿಸಿದೆ.

|
Google Oneindia Kannada News

ತಿರುವನಂತಪುರಂ, ಏಪ್ರಿಲ್ 17 : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರು ನಿಂತಿರುವ ಫೋಟೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ತನಿಖೆ ನಡೆಸುವಂತೆ ಕೇರಳ ಸರ್ಕಾರ ಆದೇಶಿಸಿದೆ.

ಭಕ್ತಾದಿಗಳು ಅಯ್ಯಪ್ಪ ಸ್ವಾಮಿಯನ್ನು ನಿರಂತರ ಬ್ರಹ್ಮಚಾರಿ ಎಂದು ಪರಿಗಣಿಸಿದ್ದು, ಗುಡ್ಡದ ಮೇಲಿನ ಅಯ್ಯಪ್ಪ ಮಂದಿರಕ್ಕೆ 10-50 ವರ್ಷ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ನಿಷೇಧವಿದೆ. ದೇವಸ್ವೊಂ ಕಾವಲು ಪಡೆಗೆ ತನಿಖೆ ನಡೆಸಿ ಫೋಟೋದ ಸತ್ಯಾಸತ್ಯೆತೆ ಕುರಿತು ವರದಿ ನೀಡುವಂತೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ಸೂಚಿಸಿದ್ದಾರೆ.[ಶಬರಿಮಲೆ: ಹೆಸರು ಬದಲಾವಣೆ ಹಿಂದಿನ ಪ್ರಮುಖ ಕಾರಣ ಇದು]

Photos of young women in Sabarimala: Kerala government orders probe

ಕೊಲ್ಲಂ ಮೂಲದ ಉದ್ಯಮಿಯೊಬ್ಬರು ವಿಶೇಷ ದರ್ಶನಕ್ಕೆ ಆಗಮಿಸಿದ್ದು, ಅವರೊಂದಿಗೆ ಕೆಲ ಮಹಿಳೆಯರು ದೇವಸ್ಥಾನ ಪ್ರವೇಶಿಸಿರುವ ಕುರಿತು ದೂರು ಬಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

ಹೀಗಾಗಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಫೋಟೋ ಕುರಿತು ತನಿಖೆ ನಡೆಸುವಂತೆ ಕೇರಳ ಸರ್ಕಾರ ಸೂಚಿಸಿದೆ.

English summary
The Kerala government has ordered an inquiry into photographs circulating on social media, purportedly showing some women in the Sabarimala Lord Ayyappa Temple despite a ban on their entry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X