ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು : ಜಂಟಿ ಸದನ ಉದ್ದೇಶಿಸಿ ಪ್ರಣಬ್ ಭಾಷಣ

|
Google Oneindia Kannada News

ನವದೆಹಲಿ, ಫೆ. 23 : ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಫೆ.26 ರಂದು ರೈಲ್ವೆ ಬಜೆಟ್ ಹಾಗೂ ಫೆ.28 ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿದೆ.

ಸೋಮವಾರ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಜಭವನದಿಂದ ಕುದುರೆ ಸಾರೂಟಿನಲ್ಲಿ ಸಂಸತ್ ಭವನಕ್ಕೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ರಾಷ್ಟ್ರಪತಿಗಳನ್ನು ಸ್ವಾಗತಿಸಿದರು.

ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರು, ದೇಶದ ಜನರಿಗೆ ಭದ್ರತೆ ಒದಗಿಸಲು ಹಾಗೂ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ದೇಶದ ಸ್ವಚ್ಛತೆಗೆ ಸರ್ಕಾರ ಆದ್ಯತೆ ನೀಡಿದೆ ಎಂದರು.

ಸೋಮವಾರದಿಂದ ಒಂದು ತಿಂಗಳ ಕಾಲ ಬಜೆಟ್ ಅಧಿವೇಶನ ನಡೆಯಲಿದೆ. ಫೆ.26 ರಂದು ರೈಲ್ವೆ ಬಜೆಟ್ ಹಾಗೂ ಫೆ.28 ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣದ ಚಿತ್ರಗಳು. [ಪಿಟಿಐ ಚಿತ್ರಗಳು]

ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉಭಯ ಸದನಗಳನ್ನು ಉದ್ದೇಶಿಸಿ ಇಂದು ಭಾಷಣ ಮಾಡಿದ್ದಾರೆ.

ಗೌರವವಂದನೆ ಸ್ವೀಕರಿಸಿದ ರಾಷ್ಟ್ರಪತಿ

ಗೌರವವಂದನೆ ಸ್ವೀಕರಿಸಿದ ರಾಷ್ಟ್ರಪತಿ

ಜಂಟಿ ಸದನ ಉದ್ದೇಶಿಸಿ ಮಾತನಾಡಲು ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನದಲ್ಲಿ ಸೋಮವಾರ ಗೌರವವಂದನೆ ಸ್ವೀಕರಿಸಿದರು.

ಕುದುರೆ ಸಾರೂಟಿನಲ್ಲಿ ಸಂಸತ್‌ಗೆ ಆಗಮನ

ಕುದುರೆ ಸಾರೂಟಿನಲ್ಲಿ ಸಂಸತ್‌ಗೆ ಆಗಮನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡಲು ಕುದುರೆ ಸಾರೂಟಿನಲ್ಲಿ ಸಂಸತ್ ಭವನಕ್ಕೆ ಆಗಮಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ವಾಗತ

ಸಂಸತ್ ಭವನಕ್ಕೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸ್ವಾಗತಿಸಿದರು.

ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲು ಕರೆ

ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲು ಕರೆ

ಸಂಸತ್ ಭವನದ ಮುಂಭಾಗದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಪಕ್ಷಗಳಿಗೆ ಮನವಿ ಮಾಡಿದರು.

ಸರ್ಕಾರದ ಸ್ವಚ್ಛತೆಗೆ ಆದ್ಯತೆ ನೀಡಲಿದೆ

ಸರ್ಕಾರದ ಸ್ವಚ್ಛತೆಗೆ ಆದ್ಯತೆ ನೀಡಲಿದೆ

ಬಡವರು ಮತ್ತು ಸಮಾಜದ ವಂಚಿತ ಸಮುದಾಯಗಳ ಏಳಿಗೆಗಾಗಿ ಸರ್ಕಾರ ಕೆಲಸ ಮಾಡಲಿದೆ ಎಂದು ರಾಷ್ಟ್ರಪತಿಗಳು ಭಾಷಣದಲ್ಲಿ ಹೇಳಿದರು. ಶಿಕ್ಷಣ, ಸ್ವಚ್ಛತೆ ಮತ್ತು ಸ್ವಚ್ಛ ಭಾರತ ಅಭಿಯಾನಕ್ಕೆ ಸರ್ಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದರು.

ಚರ್ಚೆಗೆ ಬರಲಿರುವ ವಿಧೇಯಕಗಳು

ಚರ್ಚೆಗೆ ಬರಲಿರುವ ವಿಧೇಯಕಗಳು

ಬಾಲಾಪರಾಧ ನ್ಯಾಯಮಂಡಳಿ (ಮಕ್ಕಳ ಕಾಳಜಿ ಮತ್ತು ರಕ್ಷಣೆ), ಕಾರ್ಮಿಕ ವೇತನ ಸಂಹಿತೆ, ಸಣ್ಣ ಕಾರ್ಖಾನೆಗಳ (ಉದ್ಯೋಗ ನಿಯಂತ್ರಣ ಮತ್ತು ಸೇವಾ ಸೌಲಭ್ಯಗಳ), ಔದ್ಯಮಿಕ ಸಂಪರ್ಕಗಳ ಕುರಿತ ಕಾರ್ಮಿಕ ಸಂಹಿತೆ ವಿಧೇಯಕಗಳು ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಲಿವೆ.

ಪ್ರತಿ ಮಗುವಿಗೂ ಶಿಕ್ಷಣ ನೀಡಲು ಬದ್ಧ

ಪ್ರತಿ ಮಗುವಿಗೂ ಶಿಕ್ಷಣ ನೀಡಲು ಬದ್ಧ

ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡಲು ನಾವು ಬದ್ಧ. ಈಶಾನ್ಯ ರಾಜ್ಯಗಳಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ ರಾಷ್ಟ್ರಪತಿ ಅವರು 2015 ಆಗಸ್ಟ್ 15 ರೊಳಗೆ ದೇಶದ ಎಲ್ಲಾ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ರೈಲ್ವೆ ಇಲಾಖೆಯಲ್ಲಿ ಬದಲಾವಣೆ ಆಗಬೇಕು

ರೈಲ್ವೆ ಇಲಾಖೆಯಲ್ಲಿ ಬದಲಾವಣೆ ಆಗಬೇಕು

ರೈಲ್ವೆ ಇಲಾಖೆಯಲ್ಲಿ ಹಲವು ಮಹತ್ತರ ಬದಲಾವಣೆಯಾಗಬೇಕಿದೆ ಎಂದು ಹೇಳಿದ ರಾಷ್ಟ್ರಪತಿಗಳು, ರೈಲ್ವೆ ಇಲಾಖೆಯಲ್ಲಿ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗವುದು. ಪ್ರಯಾಣಿಕರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುತ್ತೇವೆ ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ ಕಲ್ಪಿಸಿ

ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ ಕಲ್ಪಿಸಿ

ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿಯೂ ಮೂಲಭೂತ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಗಳು ಹೇಳಿದರು. ದೇಶದಲ್ಲಿನ ಯುವಕರಿಗೆ ಉದ್ಯೋಗ ದೊರೆಯುವಂತಾಗಬೇಕು ಎಂದರು.

English summary
The budget session of Parliament began on Monday with President Pranab Mukherjee's addressing joint session of both houses here is pictures.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X