ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕಾಂಗ್ರೆಸ್ ಸೋಲಿಗೆ ರಾಹುಲ್ ಗಾಂಧಿ ಕಾರಣರಲ್ಲ'

|
Google Oneindia Kannada News

ಬೆಂಗಳೂರು, ಮೇ 19 : 'ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ. ಸ್ಥಳೀಯ ನಾಯಕರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗಿದೆ' ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, 'ಕೇರಳ ಮತ್ತು ಅಸ್ಸಾಂ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ. ಚುನಾವಣೆ ಎಂದ ಮೇಲೆ ಸೋಲು-ಗೆಲವು ಇರುತ್ತದೆ' ಎಂದು ಐದು ರಾಜ್ಯಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದರು. [ಹಗರಣಗಳ ನಡುವೆಯೂ ಗಹಗಹಿಸಿದ ಮಮತಾ ಬ್ಯಾನರ್ಜಿ]

mallikarjun kharge

'ವಿಧಾನಸಭೆ ಚುನಾವಣೆಯ ಸೋಲಿಗೆ ರಾಹುಲ್ ಗಾಂಧಿ ಕಾರಣರಲ್ಲ. ಸ್ಥಳೀಯ ನಾಯಕರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗಿದೆ. ಕೆಲವು ಕಡೆ ತಪ್ಪಾಗಿದೆ. ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ತಪ್ಪು ಸರಿಪಡಿಸಿಕೊಳ್ಳುತ್ತೇವೆ' ಎಂದು ಖರ್ಗೆ ತಿಳಿಸಿದರು. [ಅಸ್ಸಾಂನಲ್ಲಿ ಕೇಸರಿ ಬಾವುಟ, ಮೈತ್ರಿಯತ್ತ ಬಿಜೆಪಿ]

ಗುರುವಾರ ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಪುದುಚೇರಿ ಬಿಟ್ಟರೆ ಬೇರೆ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತಗಳಿಸಿಲ್ಲ. ಎಲ್ಲಾ ರಾಜ್ಯಗಳಲ್ಲೂ ರಾಹುಲ್ ಗಾಂಧಿ ಪ್ರಚಾರ ನಡೆಸಿದ್ದರು. ಆದರೆ, ಚುನಾವಣೆ ಸೋಲಿಗೆ ರಾಹುಲ್ ಗಾಂಧಿ ಅವರನ್ನು ಹೊಣೆ ಮಾಡಬಾರದು ಎಂಬುದು ಖರ್ಗೆ ಅವರ ಅಭಿಪ್ರಾಯವಾಗಿದೆ.

ಫಲಿತಾಂಶ ನಿರಾಸೆ ಮೂಡಿಸಿದೆ : ಅಸ್ಸಾಂ ಮತ್ತು ಕೇರಳ ಚುನಾವಣಾ ಫಲಿತಾಂಶ ನಿರಾಸೆ ತಂದಿದೆ. ಇಂತಹ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

English summary
Leader of Congress in Lok Sabha, Mallikarjun Kharge said, Rahul Gandhi not to blame for defeat in five state assembly election defeat, reasons for the defeat lay elsewhere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X