ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಪೀಡ್ ಬ್ರೇಕರ್‌ಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

|
Google Oneindia Kannada News

ನವದೆಹಲಿ, ಏಪ್ರಿಲ್, 16: ಅಪಘಾತಗಳ ತಡೆಗೆ ಮುಂದಾಗಿರುವ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಉಬ್ಬುಗಳನ್ನು (ಸ್ಪೀಡ್‌ಬ್ರೇಕರ್) ತೆಗೆಯುವಂತೆ ಆಯಾ ರಾಜ್ಯಗಳಿಗೆ ಸೂಚನೆ ನೀಡಿದೆ.

2014ರ ರಸ್ತೆ ಅಪಘಾತ ವರದಿ ಪ್ರಕಾರ ರಸ್ತೆಯಲ್ಲಿರುವ ಹಂಪ್ ಗಳ ಕಾರಣಕ್ಕೆ ಸಂಭವಿಸಿದ ಅಪಘಾತದಲ್ಲಿ 4,726 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗುಂಡಿಗಳು ಮತ್ತು ವೇಗ ನಿಯಂತ್ರಕಗಳಿಂದಾಗಿ 6,672 ಮಂದಿ ಜೀವ ತೆತ್ತಿದ್ದಾರೆ. [ರಾಷ್ಟ್ರೀಯ ಹೆದ್ದಾರಿಯಾಗಲಿರುವ 14 ರಾಜ್ಯ ಹೆದ್ದಾರಿಗಳ ಪಟ್ಟಿ]

ಈ ಹಿಂದೆಯೇ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದ್ದರೂ ಸ್ಥಳೀಯ ಪ್ರಾಧಿಕಾರಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗ ನಿಯಂತ್ರಣಕ್ಕೆ ಹಂಪ್ ಗಳನ್ನು ಅಳವಡಿಸಿದ್ದವು. ಇವೆಲ್ಲವನ್ನು ತೆರವು ಮಾಡಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಸಚಿವಾಲಯ ತಿಳಿಸಿದೆ

road

ಕಡಿದಾದ ತಿರುವು, ಲೆವೆಲ್‌ಕ್ರಾಸಿಂಗ್ ಮತ್ತು ಅಪಘಾತ ಸ್ಥಳಗಳಲ್ಲಿ ಅಗತ್ಯವಿದ್ದರೆ ವೈಜ್ಞಾನಿಕವಾಗಿ ಉಬ್ಬುಗಳನ್ನು ನಿರ್ಮಿಸಲು ತಿಳಿಸಲಾಗಿತ್ತು ಆದರೆ ಬೇಕಾದ ಕಡೆ ರಸ್ತೆ ಉಬ್ಬುಗಳನ್ನು ನಿರ್ಮಿಸಿ ನಾಗರಿಕರ ಪ್ರಾಣಕ್ಕೆ ಕುತ್ತು ತರಲಾಗುತ್ತಿದೆ ಎಂದು ಸಚಿವಾಲಯ ಅಭಿಪ್ರಾಯ ಪಟ್ಟಿದೆ.[ಬೆಂಗಳೂರು-ಮೈಸೂರು ನಡುವೆ 6 ಪಥದ ಕಾಂಕ್ರಿಟ್ ರಸ್ತೆ]

ಕರ್ನಾಟಕಕ್ಕೆ 5 ನೇ ಸ್ಥಾನ
ಹಂಪ್ ಗಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡವರ ಲೆಕ್ಕದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಕರ್ನಾಟಕಕ್ಕೆ 5 ನೇ ಸ್ಥಾನ. ಸ್ಪೀಡ್ ಬ್ರೇಕರ್ ಬದಲು ಪರ್ಯಾಯ ವ್ಯವಸ್ಥೆಗಳನ್ನು ಅಂದರೆ ಪಾದಚಾರಿ ಮೇಲ್ಸೇತುವೆ, ಅಂಡರ್‌ಪಾಸ್‌ಗಳನ್ನು ನಿರ್ಮಿಸುವಂತೆ ಸಚಿವಾಲಯ ಸೂಚಿಸಿದೆ.

English summary
The road transport ministry has asked state governments and agencies like NHAI, state PWDs and BRO to remove all speed breakers from highways, which hinder smooth movement of traffic apart from being a safety hazard on high-speed corridors. It has also asked for details of rumble strips that have been laid with approval.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X