ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

3ವರ್ಷಗಳಲ್ಲಿ ರೂ. 71,941 ಕೋಟಿ ಅಕ್ರಮ ಆಸ್ತಿ ಪತ್ತೆ-ಕೇಂದ್ರ ಸರ್ಕಾರ

By Sachhidananda Acharya
|
Google Oneindia Kannada News

ನವದೆಹಲಿ, ಜುಲೈ 23: ಕಳೆದ ಮೂರು ವರ್ಷಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿರುವ ದಾಳಿಯಲ್ಲಿ ರೂಪಾಯಿ 71,941 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿರುವುದಾಗಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರಕಾರ ತಿಳಿಸಿದೆ.

ಇನ್ನು ದಾಳಿ ವೇಳೆ ಸಂಗ್ರಹಿಸಲಾಗಿದ್ದ ಅಘೋಷಿತ ಹಣದ ಮಾಹಿತಿಯನ್ನು ಮಾಲಿಕರು ತಿರುಚಲು ಯತ್ನಿಸಿದ್ದಾರೆ. ಇದಕ್ಕೆ ಸಂಬಂಧಿಸಿದ 400 ಪ್ರಕರಣಗಳನ್ನು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿದೆ ಎಂದೂ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಮಾಹಿತಿಯಲ್ಲಿ ಕೇಂದ್ರ ಸರಕಾರ ಹೇಳಿದೆ.

 Rs. 71,941 crore illegal assets detected in 3 years – Central govt Informed to the Supreme Court

ಇದೇ ವೇಳೆ ನವೆಂಬರ್ 8, 2016ರಿಂದ ಜನವರಿ 10, 2017ರ ಅಪನಗದೀಕರಣದ ಅವಧಿಯಲ್ಲಿ 5,400 ಕೋಟಿ ರೂಪಾಯಿ ಅಘೋಷಿತ ಆದಾಯ ಪತ್ತೆ ಹಚ್ಚಲಾಗಿದೆ. ಜತೆಗೆ 303.3 ಕೆ.ಜಿ. ಚಿನ್ನವನ್ನೂ ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ ನಲ್ಲಿ ಹಣಕಾಸು ಸಚಿವಾಲಯ ಹೇಳಿದೆ.

ಅಪನಗದೀಕರಣದ ನಂತರದ ದಾಳಿ ಸಂದರ್ಭ ಒಟ್ಟು 513 ಕೋಟಿ ರೂಪಾಯಿ ಮೌಲ್ಯದ ನಗದು ಜಪ್ತಿ ಮಾಡಲಾಗಿದ್ದು, ಇದರಲ್ಲಿ 110 ಕೋಟಿ ರೂ. ಹೊಸ ನೋಟುಗಳಾಗಿವೆ. ಇದೇ ಅವಧಿಯಲ್ಲಿ ಇದರ ಜತೆಗೆ 2890 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ಸರಕಾರ ನ್ಯಾಯಾಲಯಕ್ಕೆ ಹೇಳಿದೆ.

English summary
The Union government has informed the Supreme Court that Rs 71,941 crore illegal assets have been detected in the past three years by Income Tax department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X