ಬಾಬ್ರಿ ಮಸೀದಿ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರಿಂ ಕೋರ್ಟ್ ಒಪ್ಪಿಗೆ

By: ವಿಕಾಸ್ ನಂಜಪ್ಪ
Subscribe to Oneindia Kannada

ನವದೆಹಲಿ, ಜುಲೈ 21: ಬಾಬ್ರಿ ಮಸೀದಿ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರಿಂ ಕೋರ್ಟ್ ಸಮ್ಮತಿ ಸೂಚಿಸಿದೆ. ಬಾಬ್ರಿ ಮಸೀದಿ ಪ್ರಕರಣ ಸಂಬಂಧ ಪಿಟಿಷನ್ ಸಲ್ಲಿಸಿದ್ದ ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ತ್ವರಿತ ವಿಚಾರಣೆಗೆ ಆಗ್ರಹಿಸಿದ್ದರು.

ಅವರ ಅರ್ಜಿಯನ್ನು ಮೂಲ ಅರ್ಜಿ ಜತೆ ಸೇರಿಸಿದ ಸುಪ್ರಿಂ ಕೋರ್ಟ್ ಪ್ರಕರಣದ ತ್ವರಿತ ವಿಚಾರಣೆ ನಡೆಸುವುದಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮೂಲ ಪ್ರಕರಣವನ್ನು ಶೀಘ್ರದಲ್ಲಿ ವಿಚಾರಣೆಗಾಗಿ ಲಿಸ್ಟ್ ಮಾಡಲಾಗುವುದು ಎಂದು ಹೇಳಿದ್ದಾರೆ.

 Supreme Court agrees to hear Babri case early

ಬಾಬ್ರಿ ಮಸೀದಿ - ಶ್ರೀರಾಮ ಜನ್ಮಭೂಮಿಯ 2.7 ಎಕರೆ ಜಮೀನಿನ ಮಾಲಿಕತ್ವಕ್ಕೆ ಸಂಬಂಧಿಸಿದ ಪ್ರಕರಣದ ಇದಾಗಿದೆ. ಈ ಪ್ರಕರಣ 2010ರಿಂದ ಸುಪ್ರಿಂ ಕೋರ್ಟಿನಲ್ಲಿ ವಿಚಾರಣೆಗೆ ಬಾಕಿ ಇದೆ.

2010ರಲ್ಲಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ ನಂತರ ಸುಪ್ರಿಂ ಕೊರ್ಟಿನಲ್ಲಿ ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಆದರೆ ಆ ಪ್ರಕರಣ ಮೇಲ್ಮನವಿ ಸಲ್ಲಿಸಿದಾಗಿನಿಂದಲೂ ವಿಚಾರಣೆಗೆ ಬಾಕಿ ಇದೆ.

Babri Masjid Case Revives: Narendra Modi plays a trick against L K Advani | Oneindia Kannada

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Supreme Court has agreed to hear the Babri Masjid dispute case early. BJP leader Subramanian Swamy sought an urgent hearing of his petition. His plea has been tagged along with the main petition.
Please Wait while comments are loading...