ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ವಿರುದ್ಧ ಸುಷ್ಮಾ ಸ್ವರಾಜ್ ಟ್ವೀಟ್ ವಾರ್

|
Google Oneindia Kannada News

ನವದೆಹಲಿ, ಜು. 22: ಸಂಸತ್ ಮಳೆಗಾಲದ ಅಧಿವೇಶನ ಆರಂಭವಾಗಿದ್ದು ವಿಪಕ್ಷಗಳು ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರೆ ಇತ್ತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟರ್ ನಲ್ಲಿ ಬಾಂಬ್ ಸಿಡಿಸಿದ್ದಾರೆ.

ಈಗ ವೀಸಾ ವಿವಾದದ ಕುರಿತು ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ ನಾಯಕರೊಬ್ಬರು ಕಲ್ಲಿದ್ದಲು ಹಗರಣದ ಪ್ರಮುಖ ಆರೋಪಿಗೆ ಪಾಸ್​ಪೋರ್ಟ್ ನೀಡುವಂತೆ ತೀವ್ರ ಒತ್ತಡ ಹೇರಿದ್ದರು ಎಂದು ಬರೆದುಕೊಂಡಿದ್ದಾರೆ.[ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ನಾಲ್ಕು ಘಟವಾಣಿಯರು]

bjp

ಸುಷ್ಮಾ ಟ್ವೀಟ್ ಈಗ ಕಾಂಗ್ರೆಸ್ ನಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕಲಾಪದ ಮೊದಲ ದಿನದ ಆರಂಭದಿಂದಲೇ ಕಾಂಗ್ರಸ್​ ಸುಷ್ಮಾ ರಾಜೀನಾಮೆ ಒತ್ತಾಯಿಸುತ್ತಿದೆ. ಅಲ್ಲದೇ ವಸುಂಧರಾ ರಾಜೇ ಅವರು ರಾಜೀನಾಮೆ ನೀಡಬೇಕು ಎಂದು ಹೇಳುತ್ತದೆ.

ಸಂಸತ್ ಮಳೆಗಾಲದ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಆರೋಪವನ್ನು ಹೇಗೆ ಎದುರಿಸಬೇಕು ಎಂದು ಸಮಾಲೋಚನೆ ನಡೆಸಲು ಮಿತ್ರ ಪಕ್ಷಗಳ ಸಭೆ ನಡೆಸಿದ್ದರು. ಆದರೆ ಈಗ ಸುಷ್ಮಾ ಅವರೇ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದು ಬಿಜೆಪಿ ಯಾವ ರೀತಿ ನಡೆದುಕೊಳ್ಳಲಿದೆ ಎಂಬುದನ್ನು ನೋಡಬೇಕಿದೆ. [ಲಮೋ ಎಂದರೇನು? ರಾಜಕಾರಣಿಗಳು ಏಕೆ ಹೆದರುತ್ತಾರೆ?]

ಟ್ವಿಟರ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸಚಿವೆ ಸುಷ್ಮಾ ಸ್ವರಾಜ್ ನಾನು ಆ ನಾಯಕನ ಹೆಸರನ್ನು ಸದನದಲ್ಲೇ ಬಯಲು ಮಾಡುತ್ತೇನೆ, ಕಲ್ಲಿದ್ದಲು ಹಗರಣದ ಪ್ರಮುಖ ಆರೋಪಿ ಸಂತೋಷ್ ಬರ್ಗೋಡಿಯಾಗೆ ಪಾಸ್ ಪೋರ್ಟ್ ನೀಡಲು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ನನಗೆ ಒತ್ತಡ ಹೇರಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

ಇದು ಬ್ಲಾಕ್ ಮೇಲ್ ತಂತ್ರವಾಗಿದ್ದು ಆರೋಪಗಳಿಂದ ತಪ್ಪಿಸಿಕೊಳ್ಳಲು ಸುಷ್ಮಾ ಈ ರೀತಿ ಟ್ವೀಟ್ ಮಾಡಿದ್ದಾರೆ. ಸುಷ್ಮಾ ದೇಶ ದ್ರೋಹದ ಕೆಲಸ ಮಾಡಿದ್ದಾರೆ. ಇದು ಅವರಿಗೂ ಗೊತ್ತು. ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಬೆಲೆ ತೆರುವಂತೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ.

English summary
New delhi: Facing unrelenting opposition attacks, External Affairs Minister Sushma Swaraj tweeted this morning that she would reveal in Parliament the name of a senior Congress leader who lobbied her for a diplomatic passport for a coal scam accused leader.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X