ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳವಾರ ರಾಮನಾಥ್ ಕೋವಿಂದ್ ಪ್ರಮಾಣವಚನ ಸ್ವೀಕಾರ

By Sachhidananda Acharya
|
Google Oneindia Kannada News

ನವದೆಹಲಿ, ಜುಲೈ 24: ನೂತನವಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ಅಂದರೆ ಮಂಗಳವಾರ ನಡೆಯಲಿದೆ. ದೇಶದ ಹದಿನಾಲ್ಕನೇ ರಾಷ್ಟ್ರಪತಿಯಾಗಿ ಕೋವಿಂದ್ ಅಧಿಕಾರ ಸ್ವೀಕರಿಸಲಿದ್ದಾರೆ.

ಸಂಸತ್ತಿನ ಸೆಂಟ್ರಲ್‍ಹಾಲ್‍ನಲ್ಲಿ ನಾಳೆ ಮಧ್ಯಾಹ್ನ 12.15 ಗಂಟೆಗೆ ರಾಮನಾಥ್ ಕೋವಿಂದ್ ರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

 Swearing-in ceremony of President-elect Ram Nath Kovind on Tuesday

ನೂತನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಗೆ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಎಲ್ಲಾ ರಾಜ್ಯಗಳ ರಾಜ್ಯಪಾಲರು, ಸಂಸದರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.

 Swearing-in ceremony of President-elect Ram Nath Kovind on Tuesday

ಇನ್ನು ಇಂದಿಗೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವಧಿ ಅಂತ್ಯವಾಗಿದ್ದು, ಅವರು ಇಂದು ಸಂಜೆ ದೇಶವನ್ನುದ್ದೇಶಿಸಿ ವಿದಾಯ ಭಾಷಣ ಮಾಡಿದ್ದಾರೆ. ನಿನ್ನೆಯಷ್ಟೇ ಅವರಿಗೆ ವಿದಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

English summary
President-elect Ram Nath Kovind will be sworn-in as the 14th President of the country on Tuesday. The Ceremony of assumption of office will be held at 12.15 PM in the Central Hall of Parliament House.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X