ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ನೀರಿಗೆ ಸುಪ್ರೀಂನಲ್ಲಿ ತಮಿಳುನಾಡು ಕ್ಯಾತೆ

|
Google Oneindia Kannada News

ನವದೆಹಲಿ, ಆಗಸ್ಟ್, 22: ಕಾವೇರಿ ನದಿ ನೀರಿನ ವಿಚಾರದಲ್ಲಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. 50.52 ಟಿಎಂಸಿ ನೀರು ಬಿಡಲು ಕರ್ನಾಟಕ್ಕೆ ನಿರ್ದೇಶನ ಮಾಡಬೇಕು ಎಂದು ತಮಿಳುನಾಡು ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ ಗೆ ಮನವಿ ಸಲ್ಲಿಕೆ ಮಾಡಿದೆ.

ಮಳೆ ಕೊರತೆ ಕಾರಣ ರಾಜ್ಯದ ಜಲಾಶಯಗಳೆ ಈ ಬಾರಿ ಭರ್ತಿಯಾಗಿಲ್ಲ. ಕೆಆರ್ ಎಸ್ ನಲ್ಲಿ 96 ಅಡಿ ನೀರಿದೆ. ಇದೀಗ ತಮಿಳುನಾಡು ಸಹ ನೀರು ಕೇಳಿದ್ದು ಮುಂದಿನ ದಿನಗಳಲ್ಲಿ ಪರಿಸ್ಥಿತಿ ಬಿಗಡಾಯಿಸುವುದರಲ್ಲಿ ಅನುಮಾನವಿಲ್ಲ. ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲ ಬಾಲಾಜಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.[ಆಗಸ್ಟ್ 30ರ ತನಕ ಮಾತ್ರ ಕೆಆರ್‌ಎಸ್‌ನಿಂದ ನೀರು ಬಿಡುಗಡೆ]

krs

ಮುಂದಿನ 10 ದಿನಗಳಲ್ಲಿ 50 ಟಿಎಂಸಿ ನೀರು ಬಿಡಬೇಕು ಎಂಬುದು ತಮಿಳುನಾಡು ಸರ್ಕಾರದ ಬೇಡಿಕೆ. ತಮಿಳುನಾಡಿಗೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದ ರಾಜ್ಯ ಸರ್ಕಾರ ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿತ್ತು. ಸಚಿವ ಸಂಪುಟ ಸಭೆಯಲ್ಲಿ ನೀರು ಬಿಡುವುದರ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಲಾಗಿತ್ತು.[ನಮಗೇ ನೀರಿಲ್ಲ, ಇನ್ನು ತಮಿಳ್ನಾಡಿಗೆ ಎಲ್ಲಿಂದ ಬಿಡೋಣ?]

ಕರ್ನಾಟಕ ನೀರು ಬಿಡದೆ ಇದ್ದುದರಿಂದ 2012-13ರಲ್ಲಿ 2,500 ಕೋಟಿ ರು. ಮೌಲ್ಯದ ಬೆಳೆನಷ್ಟವಾಗಿದ್ದು, ಇದನ್ನು ಕರ್ನಾಟಕ ತುಂಬಿಕೊಡಬೇಕು ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಈ ಪ್ರಕರಣ ಸಹ ವಿಚಾರಣೆ ಹಂತದಲ್ಲಿದೆ.

English summary
The Tamil Nadu government today filed an interlocutory application seeking release of 50.52 TMC of Cauvery water from Karnataka. As per the tribunal order Karnataka was to release water on August 19, the IA states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X