ಬಾಣಲೆಯಿಂದ ಬೆಂಕಿಗೆ, ಟಿಟಿವಿ ದಿನಕರನ್ ಮೇಲೆ ಮತ್ತೊಂದು ಕೇಸ್
ಸೋಮವಾರವಷ್ಟೇ ದೆಹಲಿ ನ್ಯಾಯಾಲಯ ಟಿಟಿವಿ ದಿನಕರನ್ ಮತ್ತು ಅವರ ಆಪ್ತ ಮಲ್ಲಿಕಾರ್ಜುನ್ ರನ್ನು ತಿಹಾರ್ ಜೈಲಿಗಟ್ಟಿತ್ತು. ಮತ್ತು ಮೇ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ನವದೆಹಲಿ, ಮೇ 2: ಟಿಟಿವಿ ದಿನಕರನ್ ಪರಿಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಅವರ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ ಮತ್ತೊಂದು ಕೇಸ್ ಜಡಿದಿದೆ. ಲೇವಾದೇವಿ ಕಾಯ್ದೆಯಡಿಯಲ್ಲಿ ದಿನಕರನ್ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಈ ಹಿಂದೆ ಎಐಎಡಿಎಂಕೆಯ ಎರಡೆಲೆ ಗುರುತು ಪಡೆದುಕೊಳ್ಳಲು ಟಿಟಿವಿ ದಿನಕರನ್ ಚುನಾವಣಾ ಆಯೋಗಕ್ಕೆ 50 ಕೋಟಿ ಲಂಚ ನೀಡಲು ಹೋಗಿ ಸಿಕ್ಕಿ ಬಿದ್ದಿದ್ದರು. ಈ ಪ್ರಕರಣದ ತನಿಖೆಯನ್ನು ದೆಹಲಿ ಕ್ರೈ ಬ್ರಾಂಚ್ ಪೊಲೀಸರು ನಡೆಸುತ್ತಿರುವಾಗಲೇ ಇದೀಗ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ಆರೋಪಿಯನ್ನಾಗಿಸಿ ಜಾರಿ ನಿರ್ದೇಶನಾಲಯ ದೂರು ದಾಖಲಿಸಿಕೊಂಡಿದೆ.[ಸತತ ವಿಚಾರಣೆಯಿಂದ ಹೈರಾಣಾದರೇ ದಿನಕರನ್?]

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಶಿಕಲಾ ನಟರಾಜನ್ ಸಂಬಂಧಿ ಟಿಟಿವಿ ದಿನಕರನ್ ಪಾಲಿಗೆ ಇದು ಮತ್ತೊಂದು ಸಂಕಷ್ಟವನ್ನು ತಂದೊಡ್ಡಲಿದೆ. ಮಧ್ಯವರ್ತಿ ಸುಖೇಶ್ ಚಂದ್ರಶೇಖರ್ ಜತೆ ಸೇರಿ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪವನ್ನು ಅವರು ಎದುರಿಸುತ್ತಿದ್ದಾರೆ.[ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಶಶಿಕಲಾ ಫೊಟೋಗೂ ಜಾಗವಿಲ್ಲ!]
ಸೋಮವಾರವಷ್ಟೇ ದೆಹಲಿ ನ್ಯಾಯಾಲಯ ಟಿಟಿವಿ ದಿನಕರನ್ ಮತ್ತು ಅವರ ಆಪ್ತ ಮಲ್ಲಿಕಾರ್ಜುನ್ ರನ್ನು ತಿಹಾರ್ ಜೈಲಿಗಟ್ಟಿತ್ತು. ಮತ್ತು ಮೇ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಇಡಿಯೂ ಪ್ರಕರಣ ದಾಖಲಿಸಿಕೊಂಡಿರುವುದರಿಂದ ಉಭಯ ಆರೋಪಿಗಳಿಗೆ ಮತ್ತಷ್ಟು ಹಿನ್ನಡೆಯಾಗಿದೆ. (ಒನ್ ಇಂಡಿಯಾ ಸುದ್ದಿ)
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications