ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸರ್ಜಿಕಲ್ ಆಪರೇಷನ್' ಅಂದರೆ ಏನು ಗೊತ್ತಾ?

By ಮಾಘ
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 29: ಸರ್ಜಿಕಲ್ ಆಪರೇಷನ್-ಇದು ಹೆಸರೇ ಹೇಳುವ ಹಾಗೆ ಶಸ್ತ್ರ ಚಿಕಿತ್ಸೆಯಂಥ ನಾಜೂಕು ದಾಳಿ. ನಿರ್ದಿಷ್ಟ ಮತ್ತು ನಿಖರ ಮಿಲಿಟರಿ ಕಾರ್ಯಾಚರಣೆಯನ್ನು ಸರ್ಜಿಕಲ್ ಆಪರೇಷನ್ ಎನ್ನುತ್ತಾರೆ. ಇದನ್ನು ಪ್ರಿಸಿಷನ್‌ ಆಪರೇಷನ್ ಎಂದೂ ಕರೆಯಲಾಗುತ್ತದೆ.

ಇಂಥ ಕಾರ್ಯಾಚರಣೆಗಳು ಸಾಮಾನ್ಯವಾಗಿ ಎರಡು ಕಾರಣಕ್ಕೆ ನಡೆಯುತ್ತವೆ. ನಮ್ಮದೇ ದೇಶದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ, ಸಾಮಾನ್ಯ ಜನರನ್ನು ಒತ್ತೆಯಾಗಿ ಇರಿಸಿಕೊಂಡಾಗ ಅವರ ಬಿಡುಗಡೆಗಾಗಿ ಮತ್ತು ವೈರಿ ದೇಶದಲ್ಲಿ ನಮ್ಮ ದೇಶದ ಸರಕಾರ ಸಾಧಿಸಬೇಕಾಗಿರುವ ಮಹತ್ತರ ಗುರಿಯ ಈಡೇರಿಕೆಗಾಗಿ.[ಗುಂಡಿನ ಚಕಮಕಿಯನ್ನೇ ಸರ್ಜಿಕಲ್ ಸ್ಟ್ರೈಕ್ ಅಂತಿದೆ ಭಾರತ!]

Ranbir singh

ಇಂಥ ಕಾರ್ಯಾಚರಣೆ ನಡೆಸುವ ಮುನ್ನ ಗುಪ್ತಚರ ಮಾಹಿತಿಯನ್ನು ವ್ಯಾಪಕವಾಗಿ ಕಲೆ ಹಾಕಲಾಗುತ್ತದೆ. ವೈರಿ ದೇಶದಲ್ಲಿ ನಡೆಸಬೇಕಾದ ಕಾರ್ಯಾಚರಣೆಯಾದರೆ ಅದು ಸಾಕಷ್ಟು ಅಲ್ಪ ಕಾಲಾವಧಿಯಲ್ಲಿ ಮುಗಿದುಹೋಗುವಂತೆ, ಆದರೆ ಅದರ ಪರಿಣಾಮ ದೀರ್ಘಾವಧಿಯಲ್ಲಿ ಉಳಿದುಕೊಳ್ಳುವಂತೆ ಯೋಜನೆ ರೂಪಿಸಲಾಗುತ್ತದೆ.

ಇಂಥ ಕಾರ್ಯಾಚರಣೆಗೆ ಇಸ್ರೇಲ್ ಸೇನೆ ಹೆಸರುವಾಸಿ. ನೈಜೀರಿಯಾಗೆ ನುಗ್ಗಿದ ಇಸ್ರೇಲ್ ಸೇನೆ ತನ್ನ ಒತ್ತೆ ನಾಗರಿಕರನ್ನು ವಾಪಸ್ ಕರೆತಂದಿದ್ದು, ಭಾರತ ಸೇನೆ ಈಚೆಗೆ ಬರ್ಮಾ ಗಡಿಗೆ ನುಗ್ಗಿ ಭಯೋತ್ಪಾದಕರನ್ನು ಕೊಂದಿದ್ದು ಸರ್ಜಿಕಲ್ ಆಪರೇಷನ್‌ಗೆ ಉತ್ತಮ ಉದಾಹರಣೆ.[ಗಡಿ ನಿಯಂತ್ರಣಾ ರೇಖೆ ದಾಟಿ ಉಗ್ರರ ಸದ್ದಡಗಿಸಿದ ಭಾರತೀಯ ಸೇನೆ]


ಇದು ಒಂದು ದೇಶದ ಮಿಲಿಟರಿ ಬಲ, ಬುದ್ಧಿವಂತಿಕೆ ತೋರುವ ಟ್ಯಾಕ್ಟಿಕಲ್ ಯುದ್ಧತಂತ್ರವೂ ಹೌದು. ಇದೀಗ ಪಾಕ್ ಮೇಲೆ ಇಂಥ ಕಾರ್ಯಾಚರಣೆ ನಡೆಸಬೇಕೆಂಬ ಒತ್ತಡ ಕೇಳಿ ಬರುತ್ತಿದೆ.

English summary
Surgical Strike name itself explains attack on a particular part, within a time. It is more effective way of attack on military camps. Israel is famous for such surgical strikes. India too carried out a surgical strike on terror launch pads along Line of Control on 28th September, 2016. This attack has been hailed as Modi Punishes Pak.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X