ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರ್ಕ್ ಶೃಂಗಸಭೆಯಿಂದ ಭಾರತ, ಬಾಂಗ್ಲಾ, ಭೂತಾನ್ ದೂರ!

By Ramesh
|
Google Oneindia Kannada News

ನವದೆಹಲಿ, ಸೆ. 28 : ಪಾಕಿಸ್ತಾನಕ್ಕೆ ಪಾಠ ಕಲಿಸಲು ಇಸ್ಲಾಮಾಬಾದ್‌ ನಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

ನವೆಂಬರ್‌ನಲ್ಲಿ ನಡೆಯಲಿರುವ 19ನೇ ಸಾರ್ಕ್ ಶೃಂಗಸಭೆಯಲ್ಲಿ ಭಾರತ ಭಾಗವಹಿಸುವುದಿಲ್ಲ ಎಂದು ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದೆ. ಉರಿ ಸೇನಾ ಶಿಬಿರದ ಮೇಲೆ ಪಾಕಿಸ್ತಾನ ಉಗ್ರರಿಂದ ನಡೆದ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಬಂಧ ಹದಗೆಟ್ಟಿರುವುದರಿಂದ ಭಾರತ ಈ ನಿರ್ಧಾರ ಕೈಗೊಂಡಿದೆ.

India-pak

ಭಾರತ ಶೃಂಗಸಭೆಯಲ್ಲಿ ಭಾಗವಹಿಸದಿರುವ ನಿರ್ಧಾರಕ್ಕೆ ಇತೆರೆ ಮೂರು ರಾಷ್ಟ್ರಗಳು ಸಹ ಭಾರತಕ್ಕೆ ಕೈಜೋಡಿಸಿವೆ. ಭೂತಾನ್, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ರಾಷ್ಟ್ರಗಳು ಶೃಂಗಸಭೆಯನ್ನು ಬಹಿಸ್ಕರಿಸಲು ಮುಂದಾಗಿವೆ.

ಸಾರ್ಕ್ ಶೃಂಗಸಭೆ ನಡೆಸಲು ಯೋಗ್ಯವಾದ ಪರಿಸರವನ್ನು ಪಾಕ್‌ ಹೊಂದಿಲ್ಲ ಆದ್ದರಿಂದ ಪ್ರಸ್ತುತ ಸಭೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಭೂತಾನ್, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಅಭಿಪ್ರಾಯ ಪಟ್ಟಿರುವುದಾಗಿ ಮೂಲಗಳು ಹೇಳಿವೆ.

(ಐಎಎನ್ಎಸ್)

English summary
Following the diplomatic blitzkrieg launched by New Delhi, Pakistan is virtually getting isolated in the region with Afghanistan, Bangladesh and Bhutan joining India in boycotting the annual Saarc Summit scheduled to be hosted by Islamabad in November.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X