ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೋರ್ಚುಗಲ್ ನಲ್ಲಿ ಭೀಕರ ಕಾಡ್ಗಿಚ್ಚು, 57ಕ್ಕೂ ಹೆಚ್ಚು ಮಂದಿ ಸಾವು

|
Google Oneindia Kannada News

ಲಿಸ್ಬನ್, ಜೂನ್ 18 : ಮಧ್ಯ ಪೋರ್ಚುಗಲ್ ನಲ್ಲಿ ಭಾನುವಾರ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 57 ಜನರು ಸಾವನ್ನಪ್ಪಿ 59ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಹಿಂದೆಂದೂ ನೋಡಿರದ ಮತ್ತು ಕೇಳಿರದ ಮಹಾದುರಂತ ಇದಾಗಿದೆ. ಕಾಡ್ಗಿಚ್ಚು ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಸಾವಿರಾರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿರುವ ಕಾರ್ಯಾಚರಣೆಯನ್ನು ಮಾಡುತ್ತಿದ್ದಾರೆ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Dozens killed as forest fire rages in central Portugal

ದುರ್ಘಟನೆಯಲ್ಲಿ ಬಹುತೇಕ ಜನರು ಕಾರುಗಳಲ್ಲಿಯೇ ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ. ಪ್ರಸ್ತುತ ಹೊತ್ತಿಕೊಂಡಿರುವ ಬೆಂಕಿಯನ್ನು ನಿಯಂತ್ರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ನಂತರವಷ್ಟೇ ಕಾಡ್ಗಿಚ್ಚು ಸಂಭವಿಸಿರುವುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಪೋರ್ಚುಗಲ್ ಪ್ರಧಾನಮಂತ್ರಿ ಆಂಟೋನಿಯೊ ಕೋಸ್ಟಾ ತಿಳಿಸಿದ್ದಾರೆ.

ಇನ್ನು ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

English summary
A forest fire that engulfed villages in central Portugal has killed 57 people and injured 59, a government official said on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X