ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟರ್ಕಿ : ವಿಮಾನ ನಿಲ್ದಾಣದ ಮೇಲೆ ಉಗ್ರರ ದಾಳಿ, 36 ಸಾವು

|
Google Oneindia Kannada News

ಟರ್ಕಿ, ಜೂನ್ 29 : ಟರ್ಕಿಯ ಇಸ್ತಾಂಬುಲ್ ವಿಮಾನ ನಿಲ್ದಾಣದ ಮೇಲೆ ಉಗ್ರರ ದಾಳಿ ನಡೆದಿದೆ. ಈ ದಾಳಿಯಲ್ಲಿ 36 ಜನರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ದಾಳಿಯ ಹಿಂದೆ ಐಎಸ್‌ಐಎಸ್ ಕೈವಾಡವಿದೆ ಎಂದು ಶಂಕಿಸಲಾಗಿದೆ.

ಟ್ಯಾಕ್ಸಿ ಮೂಲಕ ವಿಮಾನ ನಿಲ್ದಾಣಕ್ಕೆ ಬಂದ ಮೂವರು ಉಗ್ರರು ಪಾರ್ಕಿಂಗ್ ಪ್ರದೇಶದಿಂದಲೇ ಗುಂಡಿನ ದಾಳಿ ಆರಂಭಿಸಿದರು. ನಂತರ ವಿಮಾನ ನಿಲ್ದಾಣಕ್ಕೆ ನುಗ್ಗಿ ತಮ್ಮನ್ನು ಸ್ಫೋಟಿಸಿಕೊಂಡಿದ್ದಾರೆ. [ರಂಜಾನ್ ತಿಂಗಳಲ್ಲಿ ಹೆಚ್ಚಾಗುತ್ತಿದೆ ಉಗ್ರರ ದಾಳಿ!]

turkey

ಈ ಗುಂಡಿನ ದಾಳಿಯಲ್ಲಿ 36 ಜನರು ಇದುವರೆಗೆ ಮೃತಪಟ್ಟಿದ್ದಾರೆ. 100ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಯಾವುದೇ ಉಗ್ರರು ಅಡಗಿಲ್ಲ ಎಂದು ಪೊಲೀಸರು ಘೋಷಿಸಿದ್ದಾರೆ. [ಟರ್ಕಿ: ಸರಣಿ ಸ್ಫೋಟಕ್ಕೆ ತತ್ತರಿಸಿದ ಶಾಂತಿಯುತ ಮೆರವಣಿಗೆ]

ಇಸ್ಲಾಮಿಕ್ ಸ್ಟೇಟ್ ಆಪ್ ಇರಾಕ್ ಆಂಡ್ ಸಿರಿಯಾ (ಐಎಸ್‌ಐಎಸ್) ಉಗ್ರರು ಈ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ.

2015ರ ಅಕ್ಟೋಬರ್‌ನಲ್ಲಿ ಟರ್ಕಿ ರಾಜಧಾನಿಯಲ್ಲಿ ಆಯೋಜಿಸಿದ್ದ ಶಾಂತಿಯುತ ಮೆರವಣಿಗೆ ಮೇಲೆ ಉಗ್ರರ ದಾಳಿ ನಡೆದಿತ್ತು. 20ಕ್ಕೂ ಅಧಿಕ ಜನರು ಈ ದಾಳಿಯಲ್ಲಿ ಮೃತಪಟ್ಟಿದ್ದರು.

English summary
Three suicide bombers opened fire at passengers with automatic rifles before blowing themselves up at Istanbul Airport Turkey. 36 killed and more than 100 injured in the attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X