ರಷ್ಯಾ & ಉಕ್ರೇನ್ ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್ ಮಹತ್ವದ ಮಾಹಿತಿ!
ರಷ್ಯಾ ಮತ್ತು ಉಕ್ರೇನ್ ಯುದ್ಧ ಬರೋಬ್ಬರಿ 4 ವರ್ಷ ಮುಗಿಸಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಯುದ್ಧ ಇಡೀ ಜಗತ್ತಿನ ನೆಮ್ಮದಿ ಹಾಳು ಮಾಡುವ ಜೊತೆಗೆ, ಯುರೋಪ್ ದೇಶಗಳ ನಿದ್ದೆಯನ್ನೇ ಹಾರಿ ಹೋಗುವಂತಹ ವಾತಾವರಣ ಸೃಷ್ಟಿ ಮಾಡಿದೆ. ಅದರಲ್ಲೂ ರಷ್ಯಾ ಮತ್ತು ಉಕ್ರೇನ್ ಯುದ್ಧವು ಶುರುವಾದ ನಂತರ ಸಾಲು ಸಾಲು ಹೊಸ ಹೊಸ ತಿಕ್ಕಾಟಗಳು ಆರಂಭ ಆಗಿದ್ದವು. ಇದೇ ಸಮಯಕ್ಕೆ ಸರಿಯಾಗಿ ಅಮೆರಿಕದಲ್ಲಿ ಟ್ರಂಪ್ ಅವರ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಹೇಗಾದರೂ ಮಾಡಿ ಈ ಯುದ್ಧ ನಿಲ್ಲಿಸಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಇದೇ ವಿಚಾರವಾಗಿ, ಟ್ರಂಪ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಖ್ಯ ಗುರಿ ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಲ್ಲಿಸುವ ನಿರ್ಣಯ ಆಗಿದ್ದು, ಇದಕ್ಕಾಗಿ ಸಾಲು ಸಾಲು ಸಭೆಗಳನ್ನು ನಡೆಸುತ್ತಿದ್ದಾರೆ. ಉಕ್ರೇನ್ ಜೊತೆ ಈ ಬಗ್ಗೆ ಸದಾ ಸಂಪರ್ಕದಲ್ಲಿ ಇದ್ದಾರೆ ಅಮೆರಿಕದ ಅಧಿಕಾರಿಗಳು. ಹೀಗಿದ್ದರೂ ಯುದ್ಧ ಮಾತ್ರ ನಿಲ್ಲುತ್ತಿಲ್ಲ, ಅತ್ತ ರಷ್ಯಾ ದಾಳಿ ಮಾಡಿದೆ ಅಂತಾ ಇತ್ತ ಉಕ್ರೇನ್ ಕೂಡ ಅಟ್ಯಾಕ್ ಮಾಡುತ್ತಿರುವ ಕಾರಣಕ್ಕೆ ತಿಕ್ಕಾಟ ಮತ್ತಷ್ಟು ಜೋರಾಗುತ್ತಿದೆ. ಆದರೆ ದಿಢೀರ್ ರಷ್ಯಾ ಮತ್ತು ಉಕ್ರೇನ್ ಯುದ್ಧದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ ಅಮೆರಿಕ ಅಧ್ಯಕ್ಷರು. ಈ ಮೂಲಕ ಯುದ್ಧ ನಿಲ್ಲುವ ಮುನ್ಸೂಚನೆ ಸಿಗುತ್ತಿದೆ.

ಟ್ರಂಪ್ & ಝೆಲೆನ್ಸ್ಕಿ ಮಹತ್ವದ ಮೀಟಿಂಗ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾಗೂ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದಾವೋಸ್ ಆರ್ಥಿಕ ಸಮ್ಮೇಳನದ ಸಮಯದಲ್ಲಿ ಭೇಟಿ ಆಗಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಅದರಲ್ಲೂ ಈ ಚರ್ಚೆ ನಂತರ ಮಹತ್ವದ ಹೇಳಿಕೆ ನೀಡಿರುವ ಡೊನಾಲ್ಡ್ ಟ್ರಂಪ್ ಅವರು ಉಕ್ರೇನ್ ಯುದ್ಧದ ವಿಚಾರದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂಬ ಮುನ್ಸೂಚನೆ ನೀಡಿದ್ದಾರೆ. 2022 ಫೆಬ್ರವರಿ ತಿಂಗಳಲ್ಲಿ ಈ ಯುದ್ಧ ಶುರುವಾಗಿತ್ತು, ಮುಂದಿನ ತಿಂಗಳಿಗೆ ಬರೋಬ್ಬರಿ 4 ವರ್ಷಗಳನ್ನು ಮುಗಿಸಿ 5ನೇ ವರ್ಷಕ್ಕೆ ಎಂಟ್ರಿ ಕೊಡಲಿದೆ ಈ ಯುದ್ಧ. ಇದೇ ಕಾರಣಕ್ಕೆ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದಾವೋಸ್ ಭೇಟಿ ಭಾರಿ ಕುತೂಹಲ ಕೆರಳಿಸಿದೆ.
ರಷ್ಯಾ ಒಪ್ಪಿಸುವುದು ದೊಡ್ಡ ತಲೆನೋವು
ಒಂದು ಕಡೆ ಉಕ್ರೇನ್ ಯುದ್ಧ ನಿಲ್ಲಿಸಲು ಗ್ರೀನ್ ಸಿಗ್ನಲ್ ನೀಡಿದರೂ ಅತ್ತ ರಷ್ಯಾ ದೇಶವನ್ನು ಈಗ ಒಪ್ಪಿಸುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಏಕೆಂದರೆ ರಷ್ಯಾ ಈ ಯುದ್ಧವನ್ನು ಸುಲಭವಾಗಿ ಬಿಟ್ಟುಕೊಡಲು ಸಿದ್ಧವಿಲ್ಲ. ಉಕ್ರೇನ್‌ಗೆ ತಕ್ಕ ಪಾಠ ಕಲಿಸಬೇಕು ಎಂಬುದು ರಷ್ಯಾದ ಗಟ್ಟಿ ನಿರ್ಧಾರವಾಗಿದೆ. ಹೀಗಾಗಿ ಇದೆಲ್ಲವನ್ನೂ ಟ್ರಂಪ್ ಅವರು ಹೇಗೆ ನಿಭಾಯಿಸುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ. ಈಗಾಗಲೇ ಯುರೋಪ್ ದೇಶಗಳು ಉಕ್ರೇನ್ ಬೆನ್ನಿಗೆ ನಿಂತು ಮತ್ತಷ್ಟು ಆರ್ಥಿಕ ಸಹಾಯ ಮಾಡುತ್ತಿವೆ, ಆದರೆ ಅಮೆರಿಕ ಮಾತ್ರ ಯುದ್ಧ ನಿಲ್ಲಿಸಲು ಒದ್ದಾಡುತ್ತಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications