ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಶರಣ ಪ್ರಕಾಶ್ ಪಾಟೀಲ್‌ಗೆ ಹೈಕೋರ್ಟ್ ಸಮನ್ಸ್

|
Google Oneindia Kannada News

ಕಲಬುರಗಿ, ಆಗಸ್ಟ್ 31 : ಕರ್ನಾಟಕ ಹೈಕೋರ್ಟ್‌ ಕಲಬುರಗಿ ಪೀಠ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. 5 ದಿನಗಳಲ್ಲಿ ಕೋರ್ಟ್‌ ಮುಂದೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಸಚಿವರು ಮೂರು ಬಾರಿ ಕೋರ್ಟ್‌ ನೀಡಿದ್ದ ನೋಟಿಸ್‌ಗೆ ಉತ್ತರ ಕೊಟ್ಟಿರಲಿಲ್ಲ. ಆದ್ದರಿಂದ, ಬುಧವಾರ 5 ದಿನಗಳಲ್ಲಿ ಖುದ್ದಾಗಿ ಹಾಜರಾಗಬೇಕು ಎಂದು ಸಮನ್ಸ್ ಜಾರಿ ಮಾಡಿದೆ.[ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ಪಟ್ಟಿ]

High Court summons minister Sharan Prakash Patil

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಮಯದಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬುದು ಆರೋಪ. ಚಿತ್ತಾಪುರದ ನಿವಾಸಿ ಅಬ್ದುಲ್ ರಬ್ ಅವರು ಸಚಿವರ ವಿರುದ್ಧ ದೂರು ನೀಡಿದ್ದರು.[30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]

ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಸಚಿವರು ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದರು ಮತ್ತು ಪ್ರದೇಶವನ್ನು ಅಭಿವೃದ್ಧಿ ಮಾಡುವುದಾಗಿ ಹೇಳಿಕೆ ಕೊಟ್ಟಿದ್ದರು.[ತಾ.ಪಂ ಫಲಿತಾಂಶ : ಯಾವ ಜಿಲ್ಲೆಯಲ್ಲಿ ಯಾರಿಗೆ ಗೆಲುವು?]

ಅಬ್ದುಲ್ ರಬ್ ಅವರು ಸಚಿವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ದೂರು ಕೊಟ್ಟಿದ್ದರು. ಕೋರ್ಟ್ ಸಚಿವರಿಗೆ ಈ ಕುರಿತು ವಿವರಣೆ ನೀಡಲು 3 ಬಾರಿ ನೋಟಿಸ್ ನೀಡಿತ್ತು. ಆದರೆ, ಅವರು ಅದಕ್ಕೆ ಉತ್ತರ ನೀಡಿರಲಿಲ್ಲ.

English summary
Karnataka high court Kalaburagi bench issued summons to Medical education minister Sharan Prakash Patil who violates Zilla and Taluka panchayat code of conduct.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X