ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯ ಕವಚಕ್ಕೆ 198 ಆಂಬ್ಯುಲೆನ್ಸ್ ಸೇರ್ಪಡೆ

|
Google Oneindia Kannada News

ಬೆಂಗಳೂರು, ನ.25 : ರಾಜ್ಯದಲ್ಲಿ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಸೇವೆ ಒದಗಿಸಲು ಹೊಸದಾಗಿ 198 ಆಂಬ್ಯುಲೆನ್ಸ್‌ಗಳನ್ನು ಸೇರ್ಪ‌ಡೆ ಮಾಡಲಾಗಿದೆ. ಸದ್ಯ ಆರೋಗ್ಯ ಕಚವ ಯೋಜನಯಡಿ 715 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಆರೋಗ್ಯ ಕವಚ ಯೋಜನೆಗೆ 192 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನರಿಗೆ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿದರು.

ambulances

ಅಪಘಾತದ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆ ದೊರೆತರೆ ಜನರ ಪ್ರಾಣಉಳಿಸಬಹುದು. ತುರ್ತು ಸಂದರ್ಭದಲ್ಲಿ ಸಹಾಯಕವಾಗಲಿ ಎಂದು 108 ಆರೋಗ್ಯ ಕವಚ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತಿದ್ದು, ಯೋಜನೆಯಡಿ 517 ಆಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದರು. [ಬೆಂಗಳೂರಿಗೆ ಬರಲಿದೆ ಬೈಕ್ ಆ್ಯಂಬುಲೆನ್ಸ್]

ಹೊಸ ವರ್ಷಕ್ಕೆ ಬೈಕ್ ಆಂಬ್ಯುಲೆನ್ಸ್ : ಸಮಾರಂಭದಲ್ಲಿ ಉಪಸ್ಥಿತರಿದ್ದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು, ಜನವರಿ 2015ರಿಂದ ಬೈಕ್ ಆಂಬ್ಯುಲೆನ್ಸ್ ಸೇವೆಯನ್ನು ಆರಂಭಿಸಲಾಗುವುದು ಎಂದು ಹೇಳಿದರು. ಏರ್ ಆಂಬ್ಯುಲೆನ್ಸ್ ಸೇವೆಯನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಅದಕ್ಕಾಗಿಯೂ ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.

ಬಜೆಟ್‌ನಲ್ಲಿ ಪ್ರಕಟಿಸಿರುವಂತೆ ಬಡವರಿಗೆ ದಂತಸೆಟ್ ವಿತರಣೆ ಮಾಡುವ 'ದಂತ ಭಾಗ್ಯ' ಯೋಜನೆಯನ್ನು ಆರಂಭಿಸಲಾಗುವುದು. ಸರ್ಕಾರ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸುತ್ತಿದೆ ಎಂದರು. ಆಂಬ್ಯುಲೆನ್ಸ್ ಚಾಲಕರು ಶಿಸ್ತಾಗಿ ಇರಬೇಕು, ರೌಡಿಗಳಂತೆ ಕಾಣಬಾರದು ಎಂದು ಸಚಿವರು ತಿಳಿಸಿದರು.

ವಾರ್ತಾ ಸಚಿವ ಆರ್. ರೋಷನ್‌ ಬೇಗ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸಚಿವ ದಿನೇಶ್‌ ಗುಂಡೂರಾವ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಶೈಲಂ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
With an addition of 198 more vehicles to the 108 Arogya Kavacha’s existing fleet of 517 ambulances. Karnataka Chief Minister Siddaramaiah flagged off the new vehicles on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X