ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2006ರ ಸಿಇಟಿ ಕಾಯ್ದೆ ಜಾರಿಗೆ ತರಲು ಸಂಪುಟದ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಮೇ 26 : ಮುಂದಿನ ಶೈಕ್ಷಣಿಕ ವರ್ಷದಿಂದ 2006ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಯನ್ನು ಕೆಲವು ತಿದ್ದುಪಡಿಗಳೊಂದಿಗೆ ಜಾರಿಗೆ ತರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಂಜೆ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ 2015-16ನೇ ಶೈಕ್ಷಣಿಕ ವರ್ಷದಿಂದ 'ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆ - 2006' ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ. [ಸಿಇಟಿ ಕಾಯ್ದೆ ಯಾರಿಗೆ ಲಾಭ? ಯಾರಿಗೆ ನಷ್ಟ?]

karnataka cet

ಸರ್ಕಾರ ಮತ್ತು ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳ ನಡುವೆ ಪ್ರತಿ ವರ್ಷ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ವಿಚಾರದಲ್ಲಿ ಒಪ್ಪಂದವಾಗುತ್ತಿತ್ತು. ಇದರ ಅನ್ವಯ ಇಂಜಿನಿಯರಿಂಗ್‌, ವೈದ್ಯಕೀಯ ಮತ್ತು ದಂತವೈದ್ಯಕೀಯ ಸೀಟುಗಳು ಭರ್ತಿಯಾಗುತ್ತಿದ್ದವು. [ಸಿಇಟಿ ಕಾಯ್ದೆ ಜಾರಿಗೆ ಬಂದರೆ, ಕಾಮೆಡ್-ಕೆ ರದ್ದು?]

ಈ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ತಂದು ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ. ಆದರೆ, ಯಾವ ಕೋರ್ಸ್‌ಗೆ ಎಷ್ಟು ಶುಲ್ಕ? ಎಂಬ ವಿಚಾರ ಇನ್ನೂ ಅಂತಿಮಗೊಂಡಿಲ್ಲ.

ಸಂಪುಟ ಸಭೆಯ ಇತರ ತೀರ್ಮಾನಗಳು

* ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇನ್ನೊಂದಿಷ್ಟು ಮಾಹಿತಿ ಕಲೆ ಹಾಕೋಣ. ಈ ವಿಷಯವನ್ನು ಮತ್ತೆ ಚರ್ಚಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಹೇಳಿದರು ಎಂದು ತಿಳಿದುಬಂದಿದೆ.

* ಬೆಂಗಳೂರು ವಿಶ್ವವಿದ್ಯಾಲಯವನ್ನು ಮೂರು ಭಾಗಗಳಾಗಿ ವಿಂಗಡನೆ ಮಾಡಲು ಸಚಿವ ಸಂಪು ಸಭೆ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ವ್ಯಾಪ್ತಿಯನ್ನು ಒಳಗೊಂಡಿದ್ದ ಬೆಂಗಳೂರು ವಿವಿ ಇನ್ನು ಮೂರು ವಿವಿಗಳಾಗಿ ಕಾರ್ಯನಿರ್ವಹಿಸಲಿವೆ. ಈ ವಿವಿಗಳು ಪ್ರತ್ಯೇಕ ಆಡಳಿತ ಕಚೇರಿಯನ್ನು ಹೊಂದಲಿವೆ.

English summary
Karnataka cabinet meeting chaired by the Chief Minister Siddaramaiah gave its approval for implement Karnataka Professional Education Regulation Act of 2006 from 2015-16 academic year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X