ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಿದ್ದರಾಮಯ್ಯ ಮಾತಿಗೆ ಕಾಂಗ್ರೆಸ್‌ನಲ್ಲಿ ಕಿಮ್ಮತ್ತಿಲ್ಲ'

|
Google Oneindia Kannada News

ಬೆಂಗಳೂರು, ಜನವರಿ 27 : 'ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿಮ್ಮತ್ತಿಲ್ಲ ಎಂಬುದು ಸಾಬೀತಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿ ಅವರು ಸೂಚಿಸಿದ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲೇವಡಿ ಮಾಡಿದರು.

ಬುಧವಾರ ಮಂತ್ರಾಲಯದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, 'ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಹರಸಾಹಸ ಪಟ್ಟಿದೆ. ಕೊನೆ ಕ್ಷಣದವರೆಗೂ ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲವಿತ್ತು. ಇದು ಚುನಾವಣೆಯಲ್ಲಿ ಬಿಜೆಪಿಗೆ ಸಹಕಾರಿಯಾಗಲಿದೆ' ಎಂದರು. [ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ]

yeddyurappa

'ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತಿಗೆ ಕಿಮ್ಮತ್ತಿಲ್ಲ ಎಂಬುದು ಸಾಬೀತಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿ ಭೈರತಿ ಸುರೇಶ್ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಪ್ರಯತ್ನಿಸಿದ್ದರು. ಕೊನೆ ಕ್ಷಣದಲ್ಲಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಈ ಮೂಲಕ ಸಿದ್ದರಾಮಯ್ಯಗೆ ಹಿನ್ನಡೆ ಉಂಟಾಗಿದೆ' ಎಂದು ಹೇಳಿದರು. [ಯಡಿಯೂರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬಹುತೇಕ ಖಚಿತ]

'ಸಿದ್ದರಾಮಯ್ಯ ಅವರ ಮಾತಿಗೆ ಬೆಲೆ ಕೊಡುವುದಿದ್ದರೆ ಭೈರತಿ ಸುರೇಶ್ ಅವರಿಗೆ ಟಿಕೆಟ್ ಸಿಗಬೇಕಿತ್ತು. ಆದರೆ, ಜಾಫರ್ ಷರೀಫ್‌ ಅವರು ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ' ಎಂದು ಯಡಿಯೂರಪ್ಪ ತಿಳಿಸಿದರು.

ಬಿಜೆಪಿ ಗೆಲುವು ಖಚಿತ : 'ಕಾಂಗ್ರೆಸ್ ಪಕ್ಷದಲ್ಲಿ ಉಪ ಚುನಾವಣೆಯ ಬಗ್ಗೆ ಹಲವು ಗೊಂದಲಗಳಿವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿಯೇ ಕೊನೆ ಕ್ಷಣದವರೆಗೆ ಗೊಂದಲವಿತ್ತು. ಇದು ಬಿಜೆಪಿಗೆ ಸಹಕಾರಿಯಾಗಲಿದ್ದು, ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ' ಎಂದು ಯಡಿಯೂರಪ್ಪ ಹೇಳಿದರು.

ಎಲ್ಲೆಲ್ಲಿ ಉಪ ಚುನಾವಣೆ? : ಹೆಬ್ಬಾಳ ಶಾಸಕ ಜಗದೀಶ್ ಕುಮಾರ್ (ಬಿಜೆಪಿ), ಬೀದರ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ (ಕೆಜೆಪಿ) ಮತ್ತು ದೇವದುರ್ಗ ಶಾಸಕ ವೆಂಕಟೇಶ ನಾಯಕ್ (ಕಾಂಗ್ರೆಸ್) ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಫೆ.13ರಂದು ಚುನಾವಣೆ ನಡೆಯಲಿದ್ದು, ಫೆ.16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

English summary
The former Chief Minister and BJP national vice-president B.S. Yeddyurappa on Wednesday slams Karnataka CM Siddaramaiah over Hebbal constituency Congress candidate selection. Hebbal constituency by poll will be held on February 13. 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X