ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶನಿವಾರ ಕರ್ನಾಟಕ ಬಂದ್ : 500 ಸಂಘಟನೆಗಳ ಬೆಂಬಲ

|
Google Oneindia Kannada News

ಬೆಂಗಳೂರು, ಏ. 17 : ಕರ್ನಾಟಕ ಸರ್ಕಾರ ಕುಡಿಯುವ ನೀರು ಒದಗಿಸಲು ಆರಂಭಿಸಲಿರುವ ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ಕ್ರಮ ಖಂಡಿಸಿ ಏ.18ರ ಶನಿವಾರ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.

ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಿಂದ ವಿವಿಧ ಕನ್ನಡ ಪರ ಸಂಘಟನೆಗಳ ಸದಸ್ಯರು ಬೃಹತ್ ಮೆರವಣಿಗೆ ನಡೆಸಲಿದ್ದಾರೆ. 500 ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ. ಕರ್ನಾಟಕ ರಾಜ್ಯ ರಸ್ತೆ ನಿಗಮದ ನೌಕರರು ಬಂದ್‌ಗೆ ಬೆಂಬಲ ನೀಡಿದ್ದು ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. [ಮೇಕೆದಾಟು ಯೋಜನೆ ಏನು, ವಿವಾದ ಏಕೆ?]

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್‌ಗೆ ಬೆಂಬಲ ನೀಡಿದ್ದು, ಶನಿವಾರ ಚಿತ್ರೀಕರಣ, ಚಿತ್ರ ಪ್ರದರ್ಶನ ಸ್ಥಗಿತಗೊಳ್ಳಲಿದೆ. ಗೂಡ್ಸ್‌ ಟ್ರಕ್‌ ಅಸೋಸಿಯೇಷನ್‌, ಬೆಂಗಳೂರು ಟೂರಿಸ್ಟ್‌ ಟ್ಯಾಕ್ಸಿ ಮಾಲೀಕರ ಸಂಘವೂ ಬಂದ್‌ಗೆ ಬೆಂಬಲ ಸೂಚಿಸಿವೆ. [ಕರ್ನಾಟಕ ಬಂದ್: ಸಾರ್ವಜನಿಕರಿಗೆ ಗೈಡ್ ಲೈನ್ಸ್]

ಕಾವೇರಿ ನ್ಯಾಯಮಂಡಳಿಯ ತೀರ್ಮಾನದಂತೆ ಕಾಲಕಾಲಕ್ಕೆ ನೀರು ಬಿಡುತ್ತಿದ್ದರೂ ತಮಿಳುನಾಡು ಸರ್ಕಾರ ರೈತರನ್ನು ಎತ್ತಿಕಟ್ಟಿ ಕಾವೇರಿ ನ್ಯಾಯಾಧೀಕರಣದ ವಿಷಯದಲ್ಲಿ ಲಾಭಪಡೆಯಲು ಯತ್ನಿಸುತ್ತಿವೆ. ಇದನ್ನು ವಿರೋಧಿಸಿ ಕರೆ ನೀಡಿರುವ ಬಂದ್‌ಗೆ ಬೆಂಬಲ ನೀಡುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಆಂಬ್ಯುಲೆನ್ಸ್ ಮತ್ತು ಅಗ್ನಿ ಶಾಮಕ ವಾಹನಗಳಿಗೆ ಮಾತ್ರ ಬಂದ್‌ನಿಂದ ವಿನಾಯಿತಿ ನೀಡಲಾಗಿದ್ದು ತುರ್ತು ಸಂದರ್ಭದಲ್ಲಿ ಅವುಗಳು ಕಾರ್ಯನಿರ್ವಹಿಸಲಿವೆ. ಬೆಂಗಳೂರು ನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ.

ಏ.18ರ ಕರ್ನಾಟಕ ಬಂದ್ ಏಕೆ?

ಏ.18ರ ಕರ್ನಾಟಕ ಬಂದ್ ಏಕೆ?

ಮೇಕೆದಾಟು ಬಳಿ ಕರ್ನಾಟಕ ನಿರ್ಮಿಸಲು ಹೊರಟಿರುವ ಅಣೆಕಟ್ಟು ವಿವಾದಕ್ಕೆ ಕಾರಣವಾಗಿದೆ. ಕಾವೇರಿಕೊಳ್ಳದಲ್ಲಿ ಕಾಮಗಾರಿ ಕೈಗೊಂಡು ಕರ್ನಾಟಕ ಕಾವೇರಿ ಐ ತೀರ್ಪನ್ನು ಉಲ್ಲಂಘಿಸುತ್ತಿದೆ ಎಂದು ತಮಿಳುನಾಡು ದೂರಿದ್ದು, ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ಖಂಡಿಸಿ ವಿವಿಧ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ವಿವಿಧ ಕನ್ನಡ ಪರ ಸಂಘಟನೆಗಳಿಂದ ಬಂದ್

ವಿವಿಧ ಕನ್ನಡ ಪರ ಸಂಘಟನೆಗಳಿಂದ ಬಂದ್

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇ ಗೌಡ ಹಾಗೂ ಪ್ರವೀಣ್‌ಶೆಟ್ಟಿ ಬಣದವರು ಈ ಬಂದ್‌ಗೆ ಬೆಂಬಲ ನೀಡಿದ್ದಾರೆ.

ಕೆಎಸ್ಆರ್‌ಟಿಸಿ, ಬಿಎಂಟಿಸಿ ಬೆಂಬಲ

ಕೆಎಸ್ಆರ್‌ಟಿಸಿ, ಬಿಎಂಟಿಸಿ ಬೆಂಬಲ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಬಂದ್‌ಗೆ ಬೆಂಬಲ ನೀಡಿದ್ದು ಬೆಂಗಳೂರಿನ ಜನರ ಜೀವನಾಡಿ ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಚಿತ್ರ ಪ್ರದರ್ಶನ ಸ್ಥಗಿತ

ಚಿತ್ರ ಪ್ರದರ್ಶನ ಸ್ಥಗಿತ

ಕರ್ನಾಟಕದ ವಿಚಾರವಾಗಿ ಬಂದ್‌ಗೆ ಕರೆ ನೀಡಿದರೆ ಕನ್ನಡ ಸಿನಿಮಾರಂಗ ಸ್ಪಂದಿಸುವುದಿಲ್ಲ ಎಂಬ ಮಾತಿದೆ. ಈ ಬಾರಿ ಅದು ಸುಳ್ಳಾಗಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್‌ಗೆ ಬೆಂಬಲ ಕೊಟ್ಟಿದೆ. ಆದ್ದರಿಂದ ಶನಿವಾರ ಚಿತ್ರೀಕರಣ, ಚಿತ್ರಪ್ರದರ್ಶನ ಸ್ಥಗಿತಗೊಳ್ಳಲಿದೆ.

ಬೆಂಬಲ ನೀಡಿರುವ ಸಂಘಟನೆಗಳು

ಬೆಂಬಲ ನೀಡಿರುವ ಸಂಘಟನೆಗಳು

ಏ.18ರ ಕರ್ನಾಟಕ ಬಂದ್‌ಗೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸೇನೆ, ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಹಾಗೂ ಪ್ರವೀಣ್‌ಶೆಟ್ಟಿ ಬಣ, ಮೈಕೋ ಕಾರ್ಖಾನೆ ಕನ್ನಡ ಸಂಘ, ಬಿಎಚ್‌ಇಎಲ್‌ ಕಾರ್ಖಾನೆ,
ಕನ್ನಡ ಜಾಗೃತಿ ವೇದಿಕೆ, ಗೂಡ್ಸ್‌ ಟ್ರಕ್‌ ಅಸೋಸಿಯೇಷನ್‌, ಬೆಂಗಳೂರು ಟೂರಿಸ್ಟ್‌ ಟ್ಯಾಕ್ಸಿ ಮಾಲೀಕರ ಸಂಘ, ಜಯ ಕರ್ನಾಟಕ ಸಂಘಟನೆ, ರಾಜ್ಯ ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ.

ಆಂಬ್ಯುಲೆನ್ಸ್‌ಗೆ ವಿನಾಯಿತಿ

ಆಂಬ್ಯುಲೆನ್ಸ್‌ಗೆ ವಿನಾಯಿತಿ

ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಡೆಯಲಿರುವ ಬಂದ್‌ನಿಂದ ಆಂಬ್ಯುಲೆನ್ಸ್ ಮತ್ತು ಅಗ್ನಿ ಶಾಮಕ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.

ಪೊಲೀಸರಿಂದ ಅಗತ್ಯ ಭದ್ರತೆ

ಪೊಲೀಸರಿಂದ ಅಗತ್ಯ ಭದ್ರತೆ

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್‌ ಕ್ರಮಗಳನ್ನು ಕೈಗೊಂಡಿದ್ದಾರೆ. ಸ್ಥಳೀಯ ಪೊಲೀಸರ ಜತೆಗೆ ಜಿಲ್ಲೆಯ ಡಿಎಆರ್‌ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಸಿಎಆರ್‌ ತುಕಡಿಗಳು ಭದ್ರತೆ ಒದಗಿಸಲಿವೆ. ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ನಗರ ಪೊಲೀಸ್ ಆಯುಕ್ತರಿಗೆ ಅಗತ್ಯ ಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.

English summary
Pro-Kannada organizations called for Karnataka bandh on April 18, 2015 against Tamil Nadu government that opposed Mekedatu drinking water project. More than 500 organizations extended support for bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X