ಕೊಪ್ಪಳ : ಸಣ್ಣ ನೀರಾವರಿ ಇಲಾಖೆ ಅವ್ಯವಹಾರದ ತನಿಖೆ ಎಸಿಬಿಗೆ
ಕೊಪ್ಪಳ, ಸೆಪ್ಟೆಂಬರ್ 08 : ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದ 13.65 ಕೋಟಿ ರೂ. ಅವ್ಯವಹಾರದ ತನಿಖೆಯನ್ನು ಎಸಿಬಿಗೆ ವಹಿಸಲಾಗಿದೆ. ನಿಯಮಬಾಹಿರವಾಗಿ ಕಾಮಗಾರಿಯನ್ನು ತುಂಡು ಗುತ್ತಿಗೆ ನೀಡಿ, ಅಕ್ರಮವಾಗಿ ಹಣ ಪಾವತಿ ಮಾಡಿದ ಪ್ರಕರಣವಿದಾಗಿದೆ.
ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಸಣ್ಣ ನೀರಾವರಿ ಇಲಾಖೆಯ ಮುಖ್ಯ ಇಂಜಿನಿಯರ್ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದ್ದರು. ಉಪ ಲೋಕಾಯುಕ್ತ ಎನ್.ಆನಂದ್ ಅವರು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದರು. ಮೂವರು ಇಂಜಿನಿಯರ್ ಈ ಪ್ರಕರಣದಲ್ಲಿ ಆರೋಪಿಗಳು ಎಂದು ವರದಿಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಭಾಗದಲ್ಲಿನ ಕಾಮಗಾರಿಯನ್ನು ಅಕ್ರಮವಾಗಿ ತುಂಡು ಗುತ್ತಿಗೆ ನೀಡಲಾಗಿದೆ. ಅಕ್ರಮವಾಗಿ ಹಣವನ್ನು ಪಾವತಿ ಮಾಡಲಾಗಿದೆ. ತುಂಡು ಗುತ್ತಿಗೆ, ಹಣ ಪಾವತಿಯಲ್ಲಿ ಸುಮಾರು 13.65 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ.
ಈ ಅಕ್ರಮದಲ್ಲಿ ಭಾಗಿಯಾಗಿರುವ ಇಂಜಿನಿಯರ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಉಪ ಲೋಕಾಯುಕ್ತರು ಶಿಫಾರಸು ಮಾಡಿದ್ದರು. ಉಪ ಲೋಕಾಯುಕ್ತರ ವರದಿ ಅನ್ವಯ ಸರ್ಕಾರ ಅವ್ಯವಹಾರದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹದಳಕ್ಕೆ ವಹಿಸಿ ಆದೇಶ ಹೊರಡಿಸಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications