ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ-ಸಕ್ರಮ ದಂಡ ಶುಲ್ಕ ನಿಗದಿ, ರಿಯಾಯಿತಿ

|
Google Oneindia Kannada News

ಬೆಂಗಳೂರು, ಮೇ 05 : ಅಕ್ರಮ ನಿವೇಶನದಲ್ಲಿ ಕಟ್ಟಿದ ಮನೆಯನ್ನು ಸಕ್ರಮಗೊಳಿಸಿಕೊಳ್ಳಲು ಸರ್ಕಾರ ದಂಡ ಶುಲ್ಕ ನಿಗದಿ ಮಾಡಿದೆ. ದಂಡ ಶುಲ್ಕದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನರಿಗೆ ಶೇ 50 ರಷ್ಟು ರಿಯಾಯಿತಿ ನೀಡಲಾಗಿದೆ.

ಬುಧವಾ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಮಾತನಾಡಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, 'ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕಂದಾಯ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಂಡವರು ದಂಡ ಪಾವತಿ ಮಾಡಿ ಸಕ್ರಮಗೊಳಿಸಕೊಳ್ಳಬಹುದು' ಎಂದರು. [ನಗರ ಪ್ರದೇಶದಲ್ಲಿ ಅಕ್ರಮ-ಸಕ್ರಮ : ಏನು, ಹೇಗೆ?]

tb jayachandra

ದಂಡ ಶುಲ್ಕ ಎಷ್ಟು? : ಗ್ರಾಮೀಣ ಪ್ರದೇಶದಲ್ಲಿ ಮನೆ ಕಟ್ಟಿ ಕೊಂಡರುವವರು 30X40, 60X40 ಹಾಗೂ 50X80 ಅಳತೆಯ ಭೂಮಿಯನ್ನು ಕಾನೂನಾತ್ಮಕವಾಗಿ ಪಡೆಯಲು ಫಲಾನುಭವಿಗಳು 2000, 4000 ಮತ್ತು 6000 ರೂ. ಪಾವತಿ ಮಾಡಬೇಕು. [ಕರ್ನಾಟಕ : ಅಕ್ರಮ-ಸಕ್ರಮ, ನಿಮಗಿದು ತಿಳಿದಿರಲಿ]

ನಗರ ಪ್ರದೇಶದಲ್ಲಿರುವ 20X30 ಅಳತೆಯಲ್ಲಿ ಮನೆಯಲ್ಲಿ ವಾಸವಾಗಿರುವ ಫಲಾನುಭವಿಗಳಿಗೆ ಸಕ್ರಮ ಮಾಡಿಕೊಳ್ಳಲು 10,000ರೂ. ದಂಡ ಪಾವತಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ಕೊಟ್ಟಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನರಿಗೆ ದಂಡಮೊತ್ತದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಲಾಗಿದೆ.

ದಂಡ ಶುಲ್ಕದಲ್ಲಿ ರಿಯಾಯಿತಿ ನೀಡಿರುವುದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮನೆಗಳನ್ನು ಸಕ್ರಮ ಮಾಡಿಕೊಳ್ಳಲು ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ.

English summary
After cabinet meeting Law minister T.B.Jayachandra said, Karnataka government decided to fix flat penalties for regularization of houses constructed on revenue land in rural and urban areas. Government is planning to extend the last date for receiving applications from encroachments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X