ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಗ್ಲ ಶಾಲೆಗಳಿಗೆ ಅನುಮತಿ ನೀಡಲು ಹೈಕೋರ್ಟ್ ಆದೇಶ

|
Google Oneindia Kannada News

ಬೆಂಗಳೂರು, ಫೆ. 28 : ಭಾಷಾ ಮಾಧ್ಯಮದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನ್ವಯ 1ರಿಂದ 5ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ನೀಡಲು ಶಾಲೆಗಳಿಗೆ ಅನುಮತಿ ನೀಡಬೇಕು ಎಂದು ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ಏಕಸದಸ್ಯಪೀಠ ಈ ಆದೇಶ ನೀಡಿದ್ದು, ಈ ಅನುಮತಿ ಸುಪ್ರೀಂಕೋರ್ಟ್ ಮುಂದೆ ಸರ್ಕಾರ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯ ಅಂತಿಮ ತೀರ್ಪಿಗೆ ಒಳಪಡುತ್ತದೆ ಎಂದು ಸ್ಪಷ್ಟಪಡಿಸಿದೆ. [ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಕನ್ನಡದಲ್ಲಿ : ಸಂಪುಟ ಒಪ್ಪಿಗೆ]

 school

ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಸರ್ಕಾರ ಸಲ್ಲಿಸಿದ್ದ ಭಾಷಾ ನೀತಿಯ ಅರ್ಜಿಯನ್ನು ವಜಾಗೊಳಿಸಿವೆ. ಯಾವ ಮಾಧ್ಯಮದಲ್ಲಿ ಶಿಕ್ಷಣ ಪಡೆಯಬೇಕು ಎಂಬುದು ಮಕ್ಕಳು ಹಾಗೂ ಅವರ ಪೋಷಕರ ಹಕ್ಕು ಎಂದು ಹೇಳಿರುವ ಕೋರ್ಟ್, ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಅನುಮತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಪರಿಶೀಲಿಸಿ ಮಾ.31ರೊಳಗೆ ಅನುಮತಿ ನೀಡಬೇಕು ಎಂದು ಹೇಳಿದೆ. [ಭಾಷೆಗೆ ಆತಂಕ ತಂದಿರುವ ಆಂಗ್ಲ ಶಾಲೆಗಳು: ಸಿದ್ದಲಿಂಗಯ್ಯ]

ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನುಮತಿ ನಿರಾಕರಿಸುವ ಮೂಲಕ ಸರ್ಕಾರ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡದೇ ನ್ಯಾಯಾಂಗ ನಿಂದನೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿರುವ ಕೋರ್ಟ್, ಮಾತೃ ಭಾಷೆ ಪರ, ವಿರೋಧಿ ಎಂಬ ಚರ್ಚೆ ಬೇಡ ಸುಪ್ರೀಂ ಆದೇಶವನ್ನು ಪಾಲಿಸಿ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ. [ಭಾಷಾ ಮಾಧ್ಯಮ ತೀರ್ಪಿನ ವಿರುದ್ಧ ಮೇಲ್ಮನವಿ]

ಕಾಲಾವಕಾಶ ಕೋರಿದ ಸರ್ಕಾರ : ಸರ್ಕಾರದ ಪರವಾಗಿ ವಾದ ಮಂಡಿಸಿದ ಪ್ರೊ.ರವಿವರ್ಮ ಕುಮಾರ್ ಅವರು, ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕ್ಯುರೇಟಿವ್ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆ ಬಾಕಿ ಇರುವುದರಿಂದ ನಾಲ್ಕುವಾರಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು. ಆದರೆ, ಸರ್ಕಾರದ ವಾದವನ್ನು ಕೋರ್ಟ್ ತಳ್ಳಿಹಾಕಿತು.

English summary
Allow English medium schools in state. Why Karnataka State government permit new English-medium schools when the Supreme Court has ruled against the language policy of allowing primary education only in Kannada medium.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X