ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಪಿಎಲ್ ಕಾರ್ಡ್‌ದಾರರಿಗೆ ಜೂ.1ರಿಂದ ಅಕ್ಕಿ ಭಾಗ್ಯ

|
Google Oneindia Kannada News

ಬೆಂಗಳೂರು, ಏ.6 : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 'ಅನ್ನಭಾಗ್ಯ' ಯೋಜನೆ ಇರುವಂತೆ ಎಪಿಎಲ್ ಕಾರ್ಡುದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು. ಜೂ.1ರಿಂದ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ಜೂ.1ರಿಂದ ಎಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದರು. [ಎಪಿಎಲ್ ಕಾರ್ಡ್ ಹೊಂದಿದ್ದರೆ ಅಕ್ಕಿ ಸಿಗುತ್ತೆ]

dinesh gundu rao

ಏ.10ರಿಂದ ಪಡಿತರ ಪಡೆಯುವವರು ನಾಡಕಚೇರಿ, ಅಟಲ್ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕಚೇರಿಗಳಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ಈ ಪ್ರಕ್ರಿಯೆ ಮೇ ಅಂತ್ಯದವರೆಗೂ ನಡೆಯಲಿದ್ದು, ಜೂ.1ರಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು. [ಪಡಿತರದ ಜೊತೆ ಸಿಗಲಿದೆ ಬೇಳೆ, ತಾಳೆ ಎಣ್ಣೆ, ಉಪ್ಪು]

ಅಕ್ಕಿ ಜೊತೆ ಬೇಳೆ, ಉಪ್ಪು : ಬಿಪಿಎಲ್‌, ಅಂತ್ಯೋದಯ ಹಾಗೂ ಎಪಿಎಲ್‌ ಕುಟುಂಬಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಇದರೊಂದಿಗೆ ಸಬ್ಸಿಡಿ ದರದಲ್ಲಿ ಬೇಳೆಕಾಳು, ತಾಳೆ ಎಣ್ಣೆ ಹಾಗೂ ಉಪ್ಪು ವಿತರಿಸುವ ಬಗ್ಗೆ ಘೋಷಣೆ ಮಾಡಲಾಗಿದೆ. ಮೇ.1ರಿಂದ ಇದನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.[ನೀವು ತಿನ್ನುವ ಅಕ್ಕಿ ಯಾವುದರಿಂದ ಮಾಡಿದ್ದು!?]

1000 ಕೋಟಿ ಉಳಿತಾಯ : ಕಳೆದ ವರ್ಷ ಅನ್ನಭಾಗ್ಯ ಯೋಜನೆ ಅನುದಾನದಲ್ಲಿ 1000 ಕೋಟಿ ರೂ. ಉಳಿತಾಯವಾಗಿದೆ. ಈ ವರ್ಷ 2,200 ಕೋಟಿ ರೂ. ನಿಗದಿಪಡಿಸಲಾಗಿದೆ. ನಕಲಿ ಕಾರ್ಡ್‌ಗಳ ಹಾವಳಿ ತಡೆಗಟ್ಟಿರುವುದರಿಂದ ಈ ಉಳಿತಾಯ ಸಾಧ್ಯವಾಗಿದೆ ಎಂದು ಸಚಿವರು ತಿಳಿಸಿದರು.

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 'ಅನ್ನಭಾಗ್ಯ' ಯೋಜನೆ ಇರುವಂತೆ ಎಪಿಎಲ್ ಕಾರ್ಡುದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವು ದಿನಗಳ ಹಿಂದೆ ಘೋಷಣೆ ಮಾಡಿದ್ದರು.

English summary
Above Poverty Line (APL) card holders in Karnataka will get 10 Kg rice from June 1 said Karnataka Food and Civil Supplies Dinesh Gundu Rao.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X