ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಸನ : ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜಿಗೆ ಅರ್ಜಿ ಆಹ್ವಾನ

|
Google Oneindia Kannada News

ಹಾಸನ, ಮೇ 14 : ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಹಾಸನದ ಗುಡ್ಡೇನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ವಿದ್ಯಾಭ್ಯಾಸದ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. [SSLC ಫಲಿತಾಂಶ, ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ]

2015-16ನೇ ಸಾಲಿನ ಪ್ರಥಮ ಪಿಯುಸಿ (ಪಿಸಿಎಂಬಿ, ಪಿಸಿಎಂಸಿ) ತರಗತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಎಸ್ಎಸ್‌ಎಲ್‌ಸಿ ಉತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 30. [ಜೂನ್ 15ರಿಂದ ಪಿಯು ತರಗತಿ ಆರಂಭ]

Hassan

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ವಿದ್ಯಾಭ್ಯಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.

ವರ್ಗವಾರು, ಲಿಂಗವಾರು ಹಾಗೂ ಮೆರಿಟ್ ಆಧಾರದ ಮೇಲೆ ಸೀಟುಗಳನ್ನು ಆಯ್ಕೆ ಮಾಡಲಾಗುತ್ತದೆ. ವಿಕಲಚೇತನ ಹಾಗೂ ಹೈದರಾಬಾದ್-ಕರ್ನಾಟಕ ವಿದ್ಯಾರ್ಥಿಗಳಿಗೆ ನಿಗದಿತ ಮೀಸಲಾತಿ ಕಲ್ಪಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಮೇ 30ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಅರ್ಜಿಗಳು ದೊರೆಯುವ ಸ್ಥಳ : ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜು ಗುಡ್ಡೇನಹಳ್ಳಿ, ಬೇಲೂರು ರಸ್ತೆ ಹಾಸನ. ಎಲ್ಲಾ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು. ತಾಲ್ಲೂಕು/ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಸನ.

English summary
Hassan Morarji Desai Pre University science residential college invited application for the admission for the 2015-16 academic year. May 30, 2015 last date for submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X