ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳ : ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜಿಗೆ ಅರ್ಜಿ ಆಹ್ವಾನ

|
Google Oneindia Kannada News

ಕೊಪ್ಪಳ, ಮೇ 18 : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ತರಗತಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 27 ಅರ್ಜಿ ಸಲ್ಲಿಕೆಗೆ ಕೊನೆ ದಿನ.

ಪ್ರಥಮ ಪಿಯುಸಿ ತರಗತಿಯ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2015-16 ನೇ ಶೈಕ್ಷಣಿಕ ವರ್ಷ ಎಸ್‍ಎಸ್‍ಎಲ್‍ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಈ ಹಿಂದೆ ಪಾಸು ಮಾಡಿರುವ ವಿದ್ಯಾರ್ಥಿಗಳು ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಬಹುದು. [SSLC ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ]

koppala

ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ನಂತರ ಬೇರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ವಿಷಯ ಸಂಯೋಜನೆಗೆ ಎಸ್‍ಎಸ್‍ಎಲ್‍ಸಿ ಯಲ್ಲಿ ಗಣಿತ, ವಿಜ್ಞಾನ, ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಪ್ರವೇಶ ನೀಡಲಾಗುವುದು. [SSLC ಫಲಿತಾಂಶದ ಮುಖ್ಯಾಂಶಗಳು]

ಮೀಸಲಾತಿ ಅನ್ವಯ ಪಿ.ಸಿ.ಎಂ.ಬಿ ಪ್ರವೇಶಕ್ಕಾಗಿ ಪ.ಜಾ-30, ಪ.ಪಂ-1, ಪ್ರವರ್ಗ 1 -1, 2ಎ-4, 2ಬಿ-1, 3ಎ-2, 3ಬಿ-1 ಒಟ್ಟು 40 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಿ.ಸಿ.ಎಂ.ಸಿ ತರಗತಿ ಪ್ರವೇಶಕ್ಕಾಗಿ ಪ.ಜಾ-30, ಪ.ಪಂ-1, ಪ್ರವರ್ಗ 1-1, 2ಎ-4, 2ಬಿ-1, 3ಎ-2, 3ಬಿ-1 ಒಟ್ಟು 40 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿಗಳನ್ನು ಮೇ.17ರಿಂದ ಕೊಪ್ಪಳ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಉಚಿತವಾಗಿ ಪಡೆದು ಭರ್ತಿ ಮಾಡಿ ಮೇ.27 ರೊಳಗಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ : ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜು, ಹಿರೇಸಿಂದೋಗಿ (ಅಳವಂಡಿ ರಸ್ತೆ) , ಕೊಪ್ಪಳ ಇಲ್ಲಿಗೆ ಸಲ್ಲಿಸಬಹುದಾಗಿದೆ. [ಮಾಹಿತಿ : ಕೊಪ್ಪಳ ವಾರ್ತೆ]

English summary
Koppal Morarji Desai Pre University science residential college invited application for the admission for the 2016-17 academic year. May 27, 2016 last date for submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X