ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡಿಕೆ ಧಾರಣೆ ಕುಸಿತ ತಡೆಗೆ ಕರ್ನಾಟಕ ಬಿಜೆಪಿ ಮನವಿ

By Madhusoodhan
|
Google Oneindia Kannada News

ಬೆಂಗಳೂರು, ಜೂನ್ 11: ಅಡಿಕೆ ಧಾರಣೆ ಇಳಿಗೆ ನಿಯಂತ್ರಣ ಹಾಕಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ.

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಕೆ ಮಾಡಲಾಗಿದೆ. ಸಂಸದರಾದ ಶ್ರೀರಾಮುಲು ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ಬಿ ವೈ ರಾಘವೇಂದ್ರ, ಆಯನೂರು ಮಂಜುನಾಥ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.[ಅಡಿಕೆ ಧಾರಣೆ ಪಾತಾಳಕ್ಕೆ, ಕಂಗೆಟ್ಟ ಬೆಳೆಗಾರ]

bjp

ಕಳೆದ ಮೂರು ತಿಂಗಳಿನಿಂದ ಇಳಿಕೆಯ ಹಾದಿಯಲ್ಲಿ ಸಾಗಿದ್ದ ಅಡಿಕೆ ಧಾರಣೆ ಇದೀಗ 3 ವರ್ಷಗಳ ಕನಿಷ್ಠ ಮಟ್ಟಕ್ಕೆ ಬಂತು ತಲುಪಿದೆ. ಶಿರಸಿ, ಶಿವಮೊಗ್ಗ, ಸಿದ್ದಾಪುರ, ಯಲ್ಲಾಪುರ, ಸಾಗರ, ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ನಿರಂತರವಾಗಿ ಕುಸಿಯುತ್ತಿದೆ. ರಾಶಿ (ಶಿರಸಿ ಮಾರುಕಟ್ಟೆ) ಕ್ವಿಂಟಾಲಿಗೆ 21 ಸಾವಿರ ರುಪಾಯಿಗಿಂತ ಕೆಳಕ್ಕೆ ತಲುಪಿದೆ.[ಅರೇಕಾ ಟೀ ಮಾರುಕಟ್ಟೆಗೆ, ನೀವು ಸ್ವಾದ ನೀಡಿದ್ರಾ!]

ದುಬಾರಿ ಗೊಬ್ಬರ, ಕಾರ್ಮಿಕರ ಅಲಭ್ಯತೆ, ಅಡಿಕೆ ಔಷಧಿ ಸಿಂಪಡಣೆ, ಸಂಸ್ಕರಣೆಯ ಪರದಾಟ ಎಲ್ಲವೂ ಸಮಸ್ಯೆಯಾಗಿ ಪರಿಣಮಿಸಿದೆ. ಶಿವಮೊಗ್ಗ, ಶಿರಸಿ, ಯಲ್ಲಾಪುರ, ಸಾಗರ, ತೀರ್ಥಹಳ್ಳಿ, ಹೊಸನಗರ ಭಾಗದ ರೈತರು ಅಡಿಕೆಯನ್ನೇ ಜೀವನಾಧಾರವಾಗಿ ನಂಬಿಕೊಂಡಿದ್ದು ಧಾರಣೆ ಕುಸಿತ ಆತಂಕ ಮನೆ ಮಾಡುವಂತೆ ಮಾಡಿದೆ.

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ

English summary
After the continues fall of arecanut price Karnataka BJP Leader submit a memorandum to Nirmala Sitharaman is the Minister of State (Independent Charge) for Ministry of Commerce & Industry , Central Government. The Karnataka BJP team led by BJP State President BS Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X