ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದನದಲ್ಲಿ ಇಂದು : ಬಿಗ್‌ಬಾಸ್ ರಿಯಾಲಿಟಿ ಶೋ ರದ್ದು ಮಾಡಲು ಪತ್ರ

|
Google Oneindia Kannada News

ಬೆಂಗಳೂರು, ನವೆಂಬರ್ 18 : ಬಿಗ್‌ಬಾಸ್ ರಿಯಾಲಿಟಿ ಶೋನಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಇಂತಹ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಎಂದು ಸರ್ಕಾರದ ಮುಖ್ಯ ಸಚೇತಕ ಆರ್.ವಿ.ವೆಂಕಟೇಶ್ ಅವರು ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಪತ್ರ ಬರೆದಿದ್ದಾರೆ.

ಬುಧವಾರ ಈ ಕುರಿತು ಪತ್ರ ಬರೆದಿರುವ ಅವರು ಸದನದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಬಿಗ್‌ಬಾಸ್ ಸೀಸನ್ 3ರಲ್ಲಿ ಹುಚ್ಚ ವೆಂಕಟ್ ಮತ್ತೊಬ್ಬ ಸ್ಪರ್ಧಿಯ ಮೇಲೆ ನಡೆಸಿದ ಹಲ್ಲೆ ಪ್ರಕರಣವನ್ನು ಮಾಧ್ಯಮಗಳು ನಿರಂತರವಾಗಿ ಪ್ರಸಾರ ಮಾಡುತ್ತಿವೆ.

ಇಂತಹ ಶೋನಿಂದ ಯಾವ ಪ್ರಯೋಜನವೂ ಇಲ್ಲ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ರದ್ದುಗೊಳಿಸಬೇಕು ಎಂದು ಹೇಳಿದರು.

ಟಿವಿ, ಪೇಪರ್‌ ಬ್ಯಾನ್ ಆಗಬೇಕು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಅವರು, 'ರಾಜ್ಯದಲ್ಲಿ ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್ ಮಾಡಿ' ಎಂದು ಸರ್ಕಾರವನ್ನು ಆಗ್ರಹಿಸಿದರು.

ಚಳಿಗಾಲದ ಅಧಿವೇಶನದ ಮೂರನೇ ದಿನದ ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಕೆ.ಎಸ್.ಈಶ್ವರಪ್ಪ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ನಿಲುವಳಿ ಸೂಚನೆಯಡಿ ವಿಷಯ ಪ್ರಸ್ತಾಪಿಸಲು ಅನುಮತಿ ನೀಡುವಂತೆ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಮನವಿ ಮಾಡಿದರು. [ರಾಜ್ಯದ ಇತ್ತೀಚಿನ ಅತ್ಯಾಚಾರ ಪ್ರಕರಣಗಳು]

assembly session

ಸದನ ಉದ್ದೇಶಿಸಿ ಮಾತನಾಡಲು ನಿಂತ ಈಶ್ವರಪ್ಪ ಅವರು 'ರಾಜ್ಯದಲ್ಲಿ ಹಾಡಹಗಲೇ ಕಳ್ಳರಿಂದ ಪೊಲೀಸರ ಕೊಲೆ ನಡೆದಿದೆ. ಅತ್ಯಾಚಾರ ಎನ್ನುವುದು ಸರಾಗವಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನದ ಊಟದಂತೆ ರೇಪ್ ನಡೆಯುತ್ತಿದೆ' ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. [ದೊಡ್ಡಬಳ್ಳಾಪುರ ಠಾಣೆಯ ಪಿಎಸ್ ಐ ಹತ್ಯೆ]

'ಪ್ರತಿದಿನ ಬೆಳಗ್ಗೆ ಟಿವಿ ಚಾನೆಲ್, ಪತ್ರಿಕೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ವರದಿಗಳು ಬರುತ್ತಿವೆ. ಇವುಗಳನ್ನು ನೋಡಲಾಗುತ್ತಿಲ್ಲ. ಆದ್ದರಿಂದ, ರಾಜ್ಯದಲ್ಲಿ ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್ ಮಾಡಿ' ಎಂದು ಸರ್ಕಾರವನ್ನು ಒತ್ತಾಯಿಸಿದರು.

ವರದಿ ಕೇಳಿದ್ದರು ಕೊಟ್ರಾ? : 'ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರ ಬಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರದಿಂದ ವರದಿ ಹೇಳಿದ್ದರು. ಸರ್ಕಾರ ರಾಜ್ಯಪಾಲರ ಪತ್ರಕ್ಕೆ ಉತ್ತರ ನೀಡಿದೆಯೇ?' ಎಂದು ಈಶ್ವರಪ್ಪ ಅವರು ಸರ್ಕಾರವನ್ನು ಪ್ರಶ್ನಿಸಿದರು.

ಸದನದಲ್ಲಿನ ಚರ್ಚೆಯ ಪ್ರಮುಖ ಅಂಶಗಳು

*ವಿಧೇಯಕ ಮಂಡನೆ : ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯನ್ನು 5 ವರ್ಷಕ್ಕೆ ಹೆಚ್ಚಿಸುವ ಕರ್ನಾಟಕ ಪಂಚಾಯತ್ ರಾಜ್ (2ನೇ ತಿದ್ದುಪಡಿ) ವಿಧೇಯಕ 2015ನ್ನು ವಿಧಾನಸಭೆಯಲ್ಲಿ ಬುಧವಾರ ಮಂಡನೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಅವರು 86 ಪುಟಗಳ ವಿಧೇಯಕವನ್ನು ಮಂಡಿಸಿದ್ದಾರೆ.

* 9,511 ಶಿಕ್ಷಕರ ನೇಮಕ : 2016ರ ಜನವರಿ ಅಂತ್ಯದೊಳಗೆ 9,511 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಪರವಾಗಿ ಉತ್ತರ ನೀಡಿದ ಸಚಿವರು, 1 ರಿಂದ 5ನೇ ತರಗತಿವರೆಗೆ 2,511 ಹಾಗೂ 6 ರಿಂದ 8ನೇ ತರಗತಿವರೆಗೆ 7000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಹೇಳಿದರು.

English summary
Karnataka assembly winter session in Vidhana Soudha, Bengaluru. Day 3, Wednesday, November 18th highlights. What happened in the assembly today?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X