ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಲೆ ಮಹದೇಶ್ವರಬೆಟ್ಟದ ಅಭಿವೃದ್ಧಿ ಬಂತು ಪ್ರಾಧಿಕಾರ

|
Google Oneindia Kannada News

ಚಾಮರಾಜನಗರ, ಡಿ.6 : ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರಬೆಟ್ಟದ ಅಭಿವೃದ್ಧಿಗಾಗಿ ರಚಿಸಲಾಗಿರುವ 'ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ' ಲೋಕಾರ್ಪಣೆಗೊಂಡಿದೆ. ವಾರ್ಷಿಕ ಸುಮಾರು 40 ಕೋಟಿ ರೂ. ಆದಾಯವಿರುವ ದೇವಾಲಯ ಇನ್ನು ಮುಜರಾಯಿ ಇಲಾಖೆ ವ್ಯಾಪ್ತಿಯಿಂದ ಹೊರ ಬಂದು ಪ್ರಾಧಿಕಾರದ ನಿರ್ವಹಣೆಗೆ ಒಳಪಡಲಿದೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ'ವನ್ನು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು, ತಿರುಪತಿ ಮಾದರಿಯಲ್ಲಿ ಮಹದೇಶ್ವರ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ರೂಪುರೇಷೆ ಸಿದ್ಧಪಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. [ಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ]

Male Mahadeshwara Hills

40 ಕೋಟಿ ಯೋಜನೆ : ಮಹದೇಶ್ವರ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮೊದಲ ಹಂತದಲ್ಲಿ 40 ಕೋಟಿ ರೂ. ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತು ಭಕ್ತರ ಅನುಕೂಲಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ ವಸತಿ ಸಮುಚ್ಚಯದ 96 ಕೊಠಡಿಗಳ ನಿರ್ಮಾಣಕ್ಕೆ ಸಿಎಂ ಚಾಲನೆ ನೀಡಿದರು. [ಮಲೆ ಮಹದೇಶ್ವರ ಬೆಟ್ಟ ಚಿತ್ರಗಳು]

ಕರ್ನಾಟಕ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಈ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತಂದಿತ್ತು. ಇನ್ನು ಮುಂದೆ ಮಲೆಮಹದೇಶ್ವರ ದೇವಾಲಯ ಮುಜರಾಯಿ ಇಲಾಖೆ ವ್ಯಾಪ್ತಿಯಿಂದ ಹೊರ ಬರಲಿದ್ದು, ಪ್ರಾಧಿಕಾರದ ನಿರ್ವಹಣೆಯಲ್ಲಿರುತ್ತದೆ.

ಸ್ವತಃ ಮುಖ್ಯಮಂತ್ರಿಗಳೇ ಪ್ರಾಧಿಕಾರದ ಅಧ್ಯಕ್ಷರಾಗಿರುವುರಿಂದ ಇದಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಆಡಳಿತವೂ ಬಿಗಿಗೊಳ್ಳಲಿದ್ದು, ಅಧಿಕಾರಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಾರೆ. ಇಂದಿನಿಂದಲೇ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹಾದೇವಪ್ರಸಾದ್, ಹನೂರು ಶಾಸಕ ಆರ್. ನರೇಂದ್ರ, ಲೋಕೋಪಯೋಗಿ ಸಚಿವ ಎಚ್.ಸಿ. ಮಹಾದೇವಪ್ಪ, ಸಂಸದ ಆರ್. ಧ್ರುವನಾರಾಯಣ ಮುಂತಾದವರು ಪ್ರಾಧಿಕಾರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

English summary
Karnataka chief minister Siddaramaiah inaugurated Male Mahadeshwara Hills authority on Friday. The authority would develop Male Mahadeshwara temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X