ರಾಜ್ಯಪಾಲರ ವಿರುದ್ಧ ಗೂಂಡಾಗಿರಿ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಸದನದಲ್ಲಿ ರಾಜ್ಯಪಾಲರ ಉಪಸ್ಥಿತಿ ವೇಳೆ ಗೂಂಡಾಗಿರಿ ಪ್ರದರ್ಶನದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಗೂಂಡಾಗಿರಿ ಕೇವಲ ರಸ್ತೆಗಳಿಗೆ ಸೀಮಿತವಾಗಿತ್ತು. ಈಗ ಅದು ಸದನ ಪ್ರವೇಶವನ್ನೂ ಮಾಡಿದೆ ಎಂದು ಆಕ್ಷೇಪಿಸಿದರು. ಗೌರವಾನ್ವಿತ ರಾಜ್ಯಪಾಲರು ಭಾಷಣ ಓದುವ ಸಂದರ್ಭದಲ್ಲಿ ಕೆಲವು ಸದಸ್ಯರು ಅವರ ಮೇಲೆ ಬಿದ್ದು ಅವರನ್ನು ಥಳಿಸುವ ಹಂತಕ್ಕೂ ಬಂದಿದ್ದುದು ಈಗಾಗಲೇ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ; ಇದನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದರು. ಈ ಗೂಂಡಾಗಿರಿಯ ಹೊಣೆ ಹೊತ್ತು ಸಿದ್ದರಾಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯಪಾಲರ ವಿರುದ್ಧ ನೀವು ಕನಿಷ್ಠ ಪ್ರಜ್ಞೆಯೂ ಇಲ್ಲದೇ ಗೂಂಡಾಗಿರಿ ಪ್ರದರ್ಶನ ಮಾಡಿರುವುದು ಅಸಾಂವಿಧಾನಿಕ; ಇದು ಸಂವಿಧಾನ ವಿರೋಧಿ. ಇವತ್ತು ರಾಜ್ಯಪಾಲರ ನಡೆ ಒಕ್ಕೂಟ ವ್ಯವಸ್ಥೆಯ ಪರವಾಗಿದೆ. ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸವನ್ನು ಅವರು ಮಾಡಿದ್ದಾರೆ. ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು. ಈಗಾಗಲೇ ಮಾನ್ಯ ಸಿ.ಟಿ.ರವಿ ಅವರು ಹೇಳಿದ ರೀತಿಯಲ್ಲಿ ಗವರ್ನರ್ ಅವರು ಬಂದು ಭಾಷಣ ಮಾಡುವಾಗ, ಅವರು ತೆರಳುವ ವೇಳೆ ಯಾರೂ ಅಡ್ಡಿಪಡಿಸುವಂತಿಲ್ಲ. ಆ ರೀತಿ ಅಡ್ಡಿ ಪಡಿಸಿದರೆ ಆ ಸದನದ ಸದಸ್ಯರನ್ನು ಆ ಅವಧಿಗೆ ಅಮಾನತು ಮಾಡಬೇಕಾಗುತ್ತದೆ. ಈ ವಿಷಯವನ್ನು ನಾವು ಸದನದಲ್ಲಿ ಮಂಡಿಸುವವರಿದ್ದೇವೆ ಎಂದು ತಿಳಿಸಿದರು.
ಕೇಂದ್ರದ ವಿರುದ್ಧವಾಗಿ ನೀವು ಸಂಘರ್ಷಕ್ಕೆ ಅಣಿ ಮಾಡುವ ಕೆಲಸ ಮಾಡಿದ್ದೀರಿ. ಗವರ್ನರ್ ಅವರ ಬೆರಳಿನಿಂದ ಅವರ ಕಣ್ಣನ್ನು ಚುಚ್ಚುವಂಥ ರೀತಿಯಲ್ಲಿ ನೀವೇನು ಭಾಷಣದಲ್ಲಿ ಬರೆದಿದ್ದೀರೋ ಅದನ್ನು ಗೌರವಾನ್ವಿತ ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಇದು ಸ್ವಾಗತಾರ್ಹ ಕ್ರಮ. ಗೌರವಾನ್ವಿತ ರಾಜ್ಯಪಾಲರು ಬರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೌರವಪೂರ್ವಕವಾಗಿ ಕರೆತರಬೇಕು. ಅವರು ಹೋಗುವಾಗ ಅದೇ ಗೌರವದಿಂದ ಬೀಳ್ಕೊಡಬೇಕೆಂದು ಸಂವಿಧಾನದಲ್ಲಿದೆ. ಸರಕಾರದ ಸಾಧನೆಗಳು, ಸರಕಾರದ ನೀತಿ- ಸಿದ್ಧಾಂತಗಳು ಮತ್ತು ಭವಿಷ್ಯದಲ್ಲಿ ಮಾಡುವ ಕೆಲಸಗಳನ್ನು ಭಾಷಣದಲ್ಲಿ ತಿಳಿಸಬೇಕಿತ್ತು. ಆದರೆ, ಇವರು ಕೇಂದ್ರದ ವಿರುದ್ಧ ಅಸಾಂವಿಧಾನಿಕವಾಗಿ, ಸಂಘರ್ಷ ಮಾಡುವ ರೀತಿಯಲ್ಲಿ ಪ್ರೇರೇಪಣೆ ಮಾಡಲು ಹೊರಟಿದ್ದರು ಎಂದು ಆಕ್ಷೇಪಿಸಿದರು.
ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ: ಆರ್ ಅಶೋಕ್
ಈ ಕುರಿತು ಆರ್ ಅಶೋಕ್ ಅವರು ಮಾತನಾಡಿ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ ಪಾಲಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಮೂಲಕ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ.
ಸದನದ ಹಿರಿಯ ಸದಸ್ಯರು ಹಾಗೂ ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಅವರೇ ಸ್ವತಃ ಈ ಕೆಟ್ಟ ಸಂಪ್ರದಾಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿರುವುದು ನಿಜಕ್ಕೂ ನಾಚಿಕೆಗೇಡು ಮತ್ತು ಖಂಡನೀಯ. ಕಾನೂನು ಸಚಿವ ಶ್ರೀ ಹೆಚ್.ಕೆ.ಪಾಟೀಲ್ ಅವರಿಗೆ ಆ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯುವ ಅರ್ಹತೆ ಇಲ್ಲ. ಇಷ್ಟಕ್ಕೂ ರಾಜ್ಯಪಾಲರು ಈ ರೀತಿ ತಮ್ಮ ಭಾಷಣವನ್ನ ಪೂರ್ತಿ ಓದದೆ ಕೇವಲ ಸಾಂಕೇತಿಕವಾಗಿ ಮಂಡಿಸಿ ಹೊರಟಿರುವುದು ಇದೇನು ಮೊದಲಲ್ಲ. ಈ ಹಿಂದೆ ಮಾಜಿ ರಾಜ್ಯಪಾಲರುಗಳಾದ ಶ್ರೀ ಖುರ್ಷಿದ್ ಆಲಂ ಖಾನ್ ಹಾಗೂ ಶ್ರೀ ಹಂಸರಾಜ್ ಭಾರಧ್ವಾಜ್ ಅವರು ಈ ರೀತಿ ಮಾಡಿರುವ ಉದಾಹರಣೆಗಳಿವೆ.
ಆಗಲೂ ಸಹ ಅವರ ಭಾಷಣದ ನಂತರ ಸಂಪ್ರದಾಯಂದತೆ ರಾಷ್ಟ್ರಗೀತೆ ಹಾಡಿ ಗೌರವಯುತವಾಗಿ ಬೀಳ್ಕೊಡಲಾಗಿತ್ತು. ಆದರೆ ಇಂದು ರಾಜ್ಯಪಾಲರು ಭಾಷಣ ಮಂಡಿಸಿದ ನಂತರ ರಾಷ್ಟ್ರಗೀತೆಯನ್ನೂ ನುಡಿಸಲಿಲ್ಲ ಮತ್ತು ರಾಜ್ಯಪಾಲರನ್ನು ಗೌರವಯುತವಾಗಿ ಬೀಳ್ಕೊಡಲೂ ಇಲ್ಲ. ಇದು ಸಂವಿಧಾನ, ರಾಜ್ಯಪಾಲರ ಹುದ್ದೆ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ನಮ್ಮ ರಾಷ್ಟ್ರಗೀತೆಗೆ ಮಾಡಿರುವ ಘೋರ ಅಪಮಾನ ಎಂದು ಹೇಳಿದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications