ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುದುರೆ ವ್ಯಾಪಾರ ತಪ್ಪಿಸಿ, ಬಿಜೆಪಿ ನಾಯಕರ ಮನವಿ

|
Google Oneindia Kannada News

ಬೆಂಗಳೂರು, ಮೇ 26 : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕುದುರೆ ವ್ಯಾಪಾರ ತಡೆಯಲು ಜೂನ್ 5ರೊಳಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಯ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಕರ್ನಾಟಕ ಬಿಜೆಪಿ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದೆ.

ಮಂಗಳವಾರ ಮಾಜಿ ಸಚಿವ ಸುರೇಶ್ ಕುಮಾರ್ ಮತ್ತು ಸಿಟಿ ರವಿ ನೇತೃತ್ವದ ಬಿಜೆಪಿ ನಾಯಕರ ನಿಯೋಗ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಚಾರಿ ಅವರನ್ನು ಭೇಟಿ ಮಾಡಿ, ಮೀಸಲಾತಿ ಪಟ್ಟಿಯನ್ನು ಜೂ.5ರೊಳಗೆ ಪ್ರಕಟಿಸಬೇಕು ಎಂದು ಮನವಿ ಸಲ್ಲಿಸಿದರು. [ಚುನಾವಣೆ ವೇಳಾಪಟ್ಟಿ]

Suresh Kumar

5,844 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೇ 29ರಂದು ಮೊದಲ ಹಂತದ ಮತದಾನವಿದೆ. ಜೂನ್ 2ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಜೂ.5ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. [ಚುನಾವಣೆ ಬಹಿಷ್ಕರಿಸಿದ ಡಿಕೆ ರವಿ ಕುಟುಂಬ]

ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟಗೊಂಡ ತಕ್ಷಣ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಪೈಪೋಟಿ ಆರಂಭವಾಗುತ್ತದೆ. ಹಣಬಲವಿರುವ ಪಕ್ಷಗಳು ಸದಸ್ಯರನ್ನು ಖರೀದಿ ಮಾಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಬೇಗನೇ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಬಿಜೆಪಿ ಮನವಿಯಲ್ಲಿ ತಿಳಿಸಿದೆ.

English summary
Karnataka BJP leaders delegation led by Former Minister Suresh Kumar and CT Ravi met state election commissioner Sreenivasachari and handed over a memorandum to announce Gram Panchayath president, Vice president reservation list before June 5, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X