ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸೌಧದಲ್ಲಿ ವೈಫೈ ಸೌಲಭ್ಯ ಕಲ್ಪಿಸಲು ಶಾಸಕರ ಮನವಿ

|
Google Oneindia Kannada News

ಬೆಂಗಳೂರು, ನವೆಂಬರ್ 18 : ವಿಧಾನಸೌಧದಲ್ಲಿ ವೈಫೈ ಸೌಲಭ್ಯ ಕಲ್ಪಿಸಬೇಕೆಂದು ಬಿಜೆಪಿ ಶಾಸಕರ ನಿಯೋಗ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಸಲ್ಲಿಸಿದೆ. ವೈಫೈ ಸೌಲಭ್ಯ ಒದಗಿಸಲು ತಗಲುವ ಖರ್ಚು-ವೆಚ್ಚ ನೋಡಿಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪೀಕರ್ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಬಿಜೆಪಿ ಶಾಸಕರಾದ ಸುರೇಶ್ ಕುಮಾರ್, ವಿಶ್ವೇಶ್ವರ ಹೆಗೆಡೆ ಕಾಗೇರಿ, ಸುನಿಲ್ ಕುಮಾರ್ ಸೇರಿದಂತೆ ಇತರ ಶಾಸಕರ ನಿಯೋಗ ಬುಧವಾರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಈ ಕುರಿತು ಮನವಿ ಸಲ್ಲಿಸಿದೆ. ಸಾಧ್ಯವಾದರೇ ಈ ಅಧಿವೇಶನದ ಅವಧಿಯಲ್ಲಿಯೇ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದೆ. [ಬೀದರ್, ದೇವದುರ್ಗ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕು]

vidhana soudha

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಉಚಿತವಾಗಿ ವೈಫೈ ವ್ಯವಸ್ಥೆ ಕಲ್ಪಿಸಲಾಗಿದೆ. ವಿಧಾನಸೌಧದ ಮೊಗಸಾಲೆಯಲ್ಲೂ ವೈಫ್ಯೆ ವ್ಯವಸ್ಥೆ ಕಲ್ಪಿಸಿದರೆ ಜನಪ್ರತಿನಿಧಿಗಳಿಗೆ ಸಹಾಯಕವಾಗಲಿದೆ ಎಂದು ಶಾಸಕರು ಮನವಿ ಮಾಡಿದ್ದಾರೆ. [ವಿಧಾನಸೌಧದ ಭದ್ರತೆಗೆ KSIF ಪಡೆ]

ಶಾಸಕರ ಮನವಿಗೆ ಸ್ಪಂದಿಸಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, 'ವೈಫೈ ಅಳವಡಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಇದಕ್ಕೆ ತಗಲುವ ಖರ್ಚು-ವೆಚ್ಚಗಳ ಬಗ್ಗೆಯೂ ಆಲೋಚಿಸಬೇಕಾಗಿದೆ. ಈ ಅಧಿವೇಶನದಲ್ಲಿ ಸಾಧ್ಯವಾಗದಿದ್ದರೆ ಮುಂದಿನ ಅಧಿವೇಶನದೊಳಗೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ' ಎಂದು ಭರವಸೆ ನೀಡಿದ್ದಾರೆ.

English summary
BJP MLA's demand for Wi-Fi facility in Vidhana Soudha houses the state legislature and the secretariat of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X