ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದು ಮೇಲೆ ಹರಿಹಾಯ್ದು, ರಾಜೀನಾಮೆಗೆ ಒತ್ತಾಯಿಸಿದ ಮಂಡ್ಯ ಜನತೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮಂಡ್ಯ,ಮಾರ್ಚ್,04: ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ಬೆಂಗಳೂರಲ್ಲಿ ಪ್ರತಿಭಟನೆ ಕೈಗೊಂಡ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಬಗ್ಗೆ ಮಂಡ್ಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದ ರೈತ ಸಂಘ, ಬಿಜೆಪಿ, ಜಯಕರ್ನಾಟಕ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು ರೈತರನ್ನು ಕಡೆಗಣಿಸುತ್ತಿದೆ ಎಂದು ದೂರಿದ್ದಾರೆ.["ನೀರು ಕೇಳಿದವರ ರಕ್ತ ಬಸಿದ ನಿಮಗೆ ನಾಚಿಕೆಯಾಗಲ್ವಾ"?]

BJP Yuva morcha members take protest against state government in Mandya

ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ರೈತರ ಸಂಘ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, 'ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರೂ ಇದರ ಬಗ್ಗೆ ದನಿ ಎತ್ತದ ರಾಜ್ಯ ಸರ್ಕಾರ ರೈತರ ಪರವಾಗಿಲ್ಲ ಎಂಬುದು ಸಾಬೀತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.[ಒಂದು ದುರ್ಘಟನೆ: ದೇಶದ ಬೆನ್ನೆಲುಬಿಗೆ ಬಾರಿಸಿದ್ರು]

ರೈತರ ಹೋರಾಟವನ್ನು ಹತ್ತಿಕ್ಕಲು ಸರ್ಕಾರವೇ ಪೊಲೀಸರನ್ನು ಬಿಟ್ಟು ರೈತರ ಮೇಲೆ ಲಾಠಿ ಪ್ರಹಾರ ನಡೆಸಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬಂದ ರೈತರನ್ನು ಪೊಲೀಸರು ಅಡ್ಡಗಟ್ಟಿದ್ದರಿಂದ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ಇದಕ್ಕೆ ಕಾರಣವಾದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಇದಕ್ಕೆ ಸಂಬಂಧಿಸಿದ ಸಚಿವರು ತಕ್ಷಣ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.[ಕರ್ನಾಟಕದಲ್ಲಿ ಭೀಕರ ಬರಗಾಲ, ಹೇಳುವವರಿಲ್ಲ ಕೇಳುವವರಿಲ್ಲ]

English summary
BJP Yuva morcha members and farmer societies take protest against government at Jayachamarajendra wodeyar circle, Mandya on Friday, March 04th. All protesters were expressed angry on Chief Minister Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X