ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಸ್ತು ಸಮಿತಿ ರಚಿಸಿದ ಬಿಎಸ್‌ವೈ, ಈಶ್ವರಪ್ಪಗೆ ಹಿನ್ನಡೆ

|
Google Oneindia Kannada News

ಬೆಂಗಳೂರು, ಜುಲೈ 04 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿಸ್ತು ಸಮಿತಿ ರಚನೆ ಮಾಡಿದ್ದಾರೆ. ಇದರಿಂದಾಗಿ ಭಿನ್ನಮತೀಯ ಚಟುವಟಿಕೆ ನಡೆಸುತ್ತಿರುವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಇತರ ನಾಯಕರಿಗೆ ಹಿನ್ನಡೆ ಉಂಟಾಗಿದೆ.

ಭಾನುವಾರ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ದೆಹಲಿಗೆ ಭೇಟಿ ನೀಡಿದ್ದರು. ಯಡಿಯೂರಪ್ಪ ಅವರು ಇತರ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ವರಿಷ್ಠರಿಗೆ ದೂರು ನೀಡಿದರು. ಇತ್ತ ಯಡಿಯೂರಪ್ಪ ಅವರು ಶಿಸ್ತು ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. [ಈಶ್ವರಪ್ಪನ ಮೂಲೆಗೆ ತಳ್ಳಿ ಒಗ್ಗೂಡಿದ ಬಿಜೆಪಿ ನಾಯಕರು]

yeddyurappa

ಶಿಸ್ತು ಸಮಿತಿಯ ಸದಸ್ಯರು : ವಿಧಾನಪರಿಷತ್ ಮಾಜಿ ಸದಸ್ಯ ಎನ್.ಶಂಕರಪ್ಪ ನೇತೃತ್ವದಲ್ಲಿ ಯಡಿಯೂರಪ್ಪ ಅವರು ಶಿಸ್ತು ಸಮಿತಿ ರಚನೆ ಮಾಡಿದ್ದಾರೆ. ಮಾಜಿ ಸಚಿವ ಸಿ.ಎಂ.ಉದಾಸಿ, ಸಂಸದ ಪಿ.ಸಿ.ಮೋಹನ್, ಶಾಸಕರಾದ ಬಿ.ಎನ್.ವಿಜಯಕುಮಾರ್ ಮತ್ತು ಶಶಿಕಲಾ ಜೊಲ್ಲೆ ಅವರು ಸಮಿತಿ ಸದಸ್ಯರಾಗಿದ್ದಾರೆ. [ಯಡಿಯೂರಪ್ಪ ವಿರುದ್ಧ ಬಿಜೆಪಿ ಅತೃಪ್ತರಿಂದ ದೂರು]

ಶನಿವಾರ ಬೆಂಗಳೂರಿನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿಯೇ ಶಿಸ್ತು ಸಮಿತಿ ರಚನೆ ಮಾಡುವುದಾಗಿ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಭಾನುವಾರ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ['ಈಶ್ವರಪ್ಪ ದೊಡ್ಡ ನಾಯಕರು, ಅವರ ಜೊತೆ ಮಾತನಾಡುವೆ']

ಇಂದು ಶಾಸಕಾಂಗ ಸಭೆ : ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗುತ್ತಿರುವುದರಿಂದ ಸಂಜೆ 6ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಈ ಸಭೆಗೆ ಈಶ್ವರಪ್ಪ ಅವರು ಹಾಜರಾಗುವರೇ? ಎಂದು ಕಾದು ನೋಡಬೇಕು.

English summary
Karnataka BJP president B.S.Yeddyurappa set up a five-member disciplinary committee. The committee is headed by N. Shankarappa former Legislative Council member.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X