ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರಿಗೆ ಬಂಪರ್ ಕೊಡುಗೆ ನೀಡಿದ ಸರ್ಕಾರ

|
Google Oneindia Kannada News

ಬೆಂಗಳೂರು, ಫೆ. 20 : ತುಮಕೂರಿನಲ್ಲಿ ಉತ್ಪಾದನಾ ವಲಯ ಸ್ಥಾಪಿಸಲು ಒಪ್ಪಿಗೆ, 862 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಕ್ಕೆ ಒಪ್ಪಿಗೆ, 150 ಮೋಟಾರು ವಾಹನ ನಿರೀಕ್ಷಕ ಹುದ್ದೆಗಳ ಭರ್ತಿ, ಚನ್ನಗಿರಿ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಗುರುವಾರ ಸಂಜೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಅವರು ಸಭೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. [ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಕನ್ನಡದಲ್ಲಿ : ಸಂಪುಟ ಒಪ್ಪಿಗೆ]

ತುಮಕೂರಿನ ವಸಂತನಸರಾಪುರದಲ್ಲಿ 13,327 ಎಕರೆ ಪ್ರದೇಶದಲ್ಲಿ ರಾಷ್ಟ್ರೀಯ ಬಂಡವಾಳ ಹೂಡಿಕೆ ಮತ್ತು ಉತ್ಪಾದನಾ ವಲಯ ಸ್ಥಾಪಿಸಲು ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು. ಇದರಿಂದ 80 ಸಾವಿರ ನೇರ ಹಾಗೂ 1.60 ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ ಎಂದರು.

ಈ ಯೋಜನೆಗಾಗಿ ವಸಂತನರಸಾಪುರದಲ್ಲಿ 3,598 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಾಕಿ ಇರುವ ಭೂಮಿಯನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಶಿರಾ ತಾಲೂಕಿನಲ್ಲಿಯೂ ಭೂಮಿ ಗುರುತಿಸಲು ಚಿಂತನೆ ನಡೆಸಲಾಗಿದೆ ಎಂದರು. ಈ ಯೋಜನೆಗೆ 3500 ಕೋಟಿ ಖರ್ಚು ಮಾಡಲು ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಂಪುಟ ಸಭೆಯ ಇತರ ನಿರ್ಣಯಗಳು

862 ಸಹಾಯಕ ಪ್ರಾಧ್ಯಾಪಕರ ನೇಮಕ

862 ಸಹಾಯಕ ಪ್ರಾಧ್ಯಾಪಕರ ನೇಮಕ

ಸರ್ಕಾರಿ ಕಾಲೇಜಿನಲ್ಲಿ ಖಾಲಿ ಇರುವ 862 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಒಪ್ಪಿಗೆ ದೊರೆತಿದೆ. ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ನೇರವಾಗಿ ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕವನ್ನು ಲೋಕಸೇವಾ ಆಯೋಗದ ಬದಲು ನೇರವಾಗಿ ನೇಮಕ ಮಾಡಿಕೊಳ್ಳಲು ನಿಯಮಾವಳಿಗೆ ಹಿಂದೆ ತಿದ್ದುಪಡಿ ತರಲಾಗಿತ್ತು.

150 ವಾಹನ ನಿರೀಕ್ಷಕ ಹುದ್ದೆಗಳ ಭರ್ತಿ

150 ವಾಹನ ನಿರೀಕ್ಷಕ ಹುದ್ದೆಗಳ ಭರ್ತಿ

ಸಾರಿಗೆ ಇಲಾಖೆಯಲ್ಲಿ 150 ಮೋಟಾರು ವಾಹನ ನಿರೀಕ್ಷಕ ಹುದ್ದೆಗಳನ್ನು ಇಲಾಖೆಯ ಮೂಲಕವೇ ನೇರವಾಗಿ ನೇಮಕ ಮಾಡಿಕೊಳ್ಳಲು ಒಪ್ಪಿಗೆ ದೊರೆತಿದೆ. ಮೈಸೂರಿನ ಸಂಚಾರ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಗಾಗಿಎಂ-ಟ್ರ್ಯಾಕ್ ಯೋಜನೆಯನ್ನು ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಲಾಗಿದೆ. ಇದಕ್ಕೆ ಸುಮಾರು 40 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

ರಾಜ್ಯದ ಕಡಲ ತೀರಗಳ ಅಭಿವೃದ್ಧಿ

ರಾಜ್ಯದ ಕಡಲ ತೀರಗಳ ಅಭಿವೃದ್ಧಿ

ರಾಜ್ಯದ ಕಡಲ ತೀರದ ಪ್ರವಾಸಿ ತಾಣಗಳನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಅಭಿವೃದ್ಧಿಪಡಿಸಲು 55 ಕೋಟಿ ರೂ. ಮೊತ್ತದ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ದಕ್ಷಿಣ ಕನ್ನಡದ 15, ಉಡುಪಿಯ 6 ಹಾಗೂ ಉತ್ತರ ಕನ್ನಡದ 12 ಪ್ರವಾಸಿ ತಾಣಗಳಲ್ಲಿ ಮೂಲಕ ಸೌಕರ್ಯಅಭಿವೃದ್ಧಿ ಪಡಿಸಲು ಕೇಂದ್ರ ಮೊದಲ ಹಂತದಲ್ಲಿ 10 ಕೋಟಿ ರೂ. ಅನುದಾನ ನೀಡಿದೆ. ರಾಜ್ಯ 29.55 ಕೋಟಿ ರೂ. ನೀಡಲು ಒಪ್ಪಿಗೆ ಸೂಚಿಸಿದೆ.

100 ಹಾಸ್ಟೆಲ್ ನಿರ್ಮಾಣಕ್ಕೆ ಒಪ್ಪಿಗೆ

100 ಹಾಸ್ಟೆಲ್ ನಿರ್ಮಾಣಕ್ಕೆ ಒಪ್ಪಿಗೆ

ವಿವಿಧ ಜಿಲ್ಲೆಗಳಲ್ಲಿ 100 ಹಾಸ್ಟೆಲ್ ನಿರ್ಮಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪರಿಶಿಷ್ಟ ಜಾತಿಗೆ 70 ಹಾಗೂ ಪರಿಶಿಷ್ಟ ಪಂಗಡಕ್ಕೆ 30 ಹಾಸ್ಟೆಲ್‌ಗಳನ್ನು ನಿರ್ಮಾಣ ಮಾಡಲಾಗುತ್ತದೆ.

ರಾಣಿ ಚೆನ್ನಮ್ಮ ಶಾಲೆಗಳ ಸ್ಥಾಪನೆ

ರಾಣಿ ಚೆನ್ನಮ್ಮ ಶಾಲೆಗಳ ಸ್ಥಾಪನೆ

ಬೆಳಗಾವಿಯ ಹಾಲಬಾಂವಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಲಬುರಗಿಯ ಚೌಡಾಪುರ, ಕೋಲಾರ ಜಿಲ್ಲೆಯ ಚಲ್ದಿಗಾನಹಳ್ಳಿಯಲ್ಲಿ ರಾಣಿ ಚೆನ್ನಮ್ಮ ವಸತಿ ಶಾಲೆಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಇತರ ನಿರ್ಣಯಗಳು

ಸಚಿವ ಸಂಪುಟ ಸಭೆಯ ಇತರ ನಿರ್ಣಯಗಳು

* ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ 10 ಗುಂಟೆ ಜಮೀನು ಮಂಜೂರು.
* ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೆ.
* ಗದಗದಲ್ಲಿ ಧಾರವಾಡ ಕರ್ನಾಟಕ ವಿ.ವಿ.ಯ ಸ್ನಾತಕೋತ್ತರ ಕೇಂದ್ರ ಆರಂಭ
* 176 ತಾಲೂಕಿಗೆ ಒಂದರಂತೆ ಹೊಸದಾಗಿ 176 ನೋಟರಿ ಹುದ್ದೆ ಸೃಷ್ಟಿಸಲು ಒಪ್ಪಿಗೆ.

English summary
Karnataka government Thursday approved for land acquisition for the proposed National Investment and Manufacturing Zone in Vasantha Narsapura, Tumakuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X