ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ನೀರು ಹಂಚಿಕೆ, ಕರ್ನಾಟಕದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ ಸುಪ್ರೀಂಕೋರ್ಟ್ ಶುಕ್ರವಾರದಂದು ಆದೇಶ ನೀಡಿದೆ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಏಪ್ರಿಲ್ 07: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ ಸುಪ್ರೀಂಕೋರ್ಟ್ ಶುಕ್ರವಾರದಂದು ಆದೇಶ ನೀಡಿದೆ. ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ಕರ್ನಾಟಕ ಒಟ್ಟು ಮೂರು ಮರು ಪರಿಶೀಲನಾ ಅರ್ಜಿಗಳನ್ನು ಹಾಕಿತ್ತು. ಕಾವೇರಿ ಜಲ ನಿರ್ವಹಣಾ ಮಂಡಳಿ ಸ್ಥಾಪನೆಗೆ ನೀಡಿರುವ ಆದೇಶವನ್ನು ರದ್ದುಪಡಿಸಬೇಕು. [ಜುಲೈ 11 ರ ತನಕ ತಮಿಳುನಾಡಿಗೆ ಕಾವೇರಿ ಹರಿಸಿ, ಕರ್ನಾಟಕಕ್ಕೆ ಸೂಚನೆ]

Cauvery: SC rejects Karnataka's review to release 6,000 cusecs water

ತಮಿಳುನಾಡಿಗೆ ಆಕ್ಟೋಬರ್ 06ರತನಕ 6,000 ಕ್ಯೂಸೆಕ್ಸ್ ನೀರು ಹರಿಸಬೇಕು ಎಂಬ ಆದೇಶ ಮರು ಪರಿಶೀಲನೆ ಮಾಡಬೇಕು. ಮುಂಗಾರು ದುರ್ಬಲವಾಗಿರುವ ಮುನ್ಸೂಚನೆ ಸಿಕ್ಕಿರುವುದರಿಂದ ಮುಂದಿನ ಮಳೆಗಾಲದ ತನಕ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶಿಸುವಂತೆ ಕೋರಲಾಗಿತ್ತು.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]

ಈಶಾನ್ಯ್ ಮಾರುತಗಳಿಂದ ಉತ್ತಮ ಮುಂಗಾರಿನ ನಿರೀಕ್ಷೆಯಿಲ್ಲ. ಕರ್ನಾಟಕ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ನಡೆಸಿದೆ. ಕಾವೇರಿ ಕೊಳ್ಳದಲ್ಲಿ ಕುಡಿಯುವ ನೀರಿನ ಕ್ಷಾಮ ಉಂಟಾಗಿದೆ ಎಂದು ಕರ್ನಾಟಕ ವಾದಿಸಿದೆ.

English summary
The Supreme Court has rejected Karnataka's review plea in the Cauvery waters case. Karnataka has sought a review of the SC order directing the state to release Cauvery water to Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X