ನ.2ಕ್ಕೆ ಕೇಂದ್ರ ಬರ ಅಧ್ಯಯನ ತಂಡ ರಾಜ್ಯ ಪ್ರವಾಸ

ಮಳೆ ವೈಫಲ್ಯದಿಂದಾಗಿ ರಾಜ್ಯದ 110 ತಾಲೂಕು ಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದ್ದು. ಕೇಂದ್ರ ಅಧ್ಯಯನ ತಂಡ ನ.2ರಂದು ರಾಜ್ಯ ಪ್ರವಾಸ ಕೈಗೊಂಡು ಬರ ಪೀಡಿತ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಲಿದೆ.

Written by:
Subscribe to Oneindia Kannada

ಬೆಂಗಳೂರು, ಅಕ್ಟೋಬರ್. 29 : ಮಳೆ ವೈಫಲ್ಯದಿಂದ ರಾಜ್ಯದಲ್ಲಿ ತಲೆದೂರಿರುವ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ನೇತೃತ್ವದ ತಂಡ ನವೆಂಬರ್ 2 ರಿಂದ ರಾಜ್ಯ ಪ್ರವಾಸ ಮಾಡಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ಮುಂಗಾರು ವಿಫಲ ಜತೆಗೆ ಹಿಂಗಾರು ಸಹ ರಾಜ್ಯದಲ್ಲಿ ತೀವ್ರ ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ 2 ಕಂತುಗಳಲ್ಲಿ 25 ಜಿಲ್ಲೆಯ 110 ತಾಲೂಕು ಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಈ ಪ್ರದೇಶಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. [ಕರ್ನಾಟಕದಲ್ಲಿ ಬರ, ಕೇಂದ್ರದಿಂದ 3,760 ಕೋಟಿ ರುಗೆ ಮನವಿ]

ಅನಾವೃಷ್ಟಿ ಹಾಗೂ ಅತಿವೃಷ್ಟಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉಂಟಾದ ಒಟ್ಟಾರೆ ನಷ್ಟದ ಪ್ರಮಾಣ 14,630.85 ಕೋಟಿ ರೂ ಎಂದು ಅಂದಾಜಿಸಲಾಗಿದೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ಬರ ಹಾಗೂ ಪ್ರವಾಹದಿಂದಾಗಿ ಉಂಟಾಗಿರುವ ನಷ್ಟದ ವರದಿಯನ್ನು ಕೇದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದರು.

ಕೇಂದ್ರದಿಂದ 3,760 ಕೋಟಿ ರುಗೆ ಮನವಿ

ಅನಾವೃಷ್ಟಿ ಹಾಗೂ ಅತಿವೃಷ್ಟಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉಂಟಾದ ಬೆಳೆ ಮತ್ತು ಆಸ್ತಿ - ಪಾಸ್ತಿಯ ಒಟ್ಟಾರೆ ನಷ್ಟದ ಪ್ರಮಾಣ 14,630.85 ಕೋಟಿ ರೂ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ 3,760.29 ಕೋಟಿ ರೂ ಪರಿಹಾರವನ್ನು ಕೋರಲು ರಾಜ್ಯ ಸಚಿವ ಸಂಪುಟವು ನಿರ್ಧರಿಸಿದೆ

ಕೇಂದ್ರಕ್ಕೆ ಬರ ವರದಿ ಸಲ್ಲಿಕೆ

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ಬರ ಹಾಗೂ ಪ್ರವಾಹದಿಂದಾಗಿ ಉಂಟಾಗಿರುವ ನಷ್ಟದ ವರದಿಯನ್ನು ಕೇದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದರು.

25 ಜಿಲ್ಲೆಯ 110 ತಾಲೂಕುಗಳು ಬರ ಪೀಡಿತ

2 ಕಂತುಗಳಲ್ಲಿ 25 ಜಿಲ್ಲೆಯ 110 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಈ ಪ್ರದೇಶಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಹಾನಿ

ಇತ್ತೀಚೆಗೆ ಸತತ ಸುರಿದ ಭಾರೀ ಮಳೆಯಿಂದಾಗಿ ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಪ್ರವಾಹ ಹಾನಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಪ್ರಾಥಮಿಕ ವರದಿ ಪ್ರಕಾರ 35 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ.

 

 

ಕಲಬುರಗಿ ಮತ್ತು ಬೀದರ್ ಜಿಲ್ಲೆಗೆ ಪರಿಹಾರ

ಕಲಬುರಗಿ ಮತ್ತು ಬೀದರ್ ಜಿಲ್ಲೆಯ ಮಳೆ ಮತ್ತು ಪ್ರವಾಹದಿಂದಾಗಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಭವಿಸಿರುವ ಹಾನಿಗೆ ತುರ್ತು ಪರಿಹಾರಕ್ಕೆ ಬೀದರ್‌ ಜಿಲ್ಲೆಗೆ 50 ಕೋಟಿ ಹಾಗೂ ಕಲಬುರಗಿ ಜಿಲ್ಲೆಗೆ 25 ಕೋಟಿ ರು ಅನುದಾನವನ್ನು ಸೆ.28(ಬುಧವಾರ) ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು

 

 

ನವೆಂಬರ್.2ಕ್ಕೆ ಕೇಂದ್ರ ಬರ ಪ್ರವಾಸ ತಂಡ

ರಾಜ್ಯದಲ್ಲಿ ತಲೆದೂರಿರುವ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ತಂಡ ನ.2 ರಂದು ರಾಜ್ಯಕ್ಕೆ ಬರಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

English summary
The central drought assessment team, which is in Karnataka to study the drought conditions in 110 taluks paid a visit on November 02.
Please Wait while comments are loading...