ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮರಾಜನಗರ : ಅಂಬೇಡ್ಕರ್‌ಗೆ ಅಪಮಾನ, ಹೊಂಗನೂರು ಉದ್ವಿಗ್ನ

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಏಪ್ರಿಲ್ 29 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬೃಹತ್ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದರಿಂದ ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ಕೋಮಿನ ನಡುವೆ ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿದ್ದರೆ, ಸುಮಾರು 20 ಅಂಗಡಿಗಳು ಬೆಂಕಿಗಾಹುತಿಯಾಗಿದೆ.

ಹೊಂಗನೂರು ಗ್ರಾಮದಲ್ಲಿ ಬಸ್ ನಿಲ್ದಾಣದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗೆ ಗ್ರಾಮದ ಒಂದು ಕೋಮಿನ ಕೆಲವು ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದರು. ಇದರ ವಿರುದ್ಧ ಗುರುವಾರ ಪ್ರತಿಭಟನೆ ನಡೆಯುವಾಗ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. [ಅಷ್ಟೊಂದು ಅವಮಾನವಾಗದಿದ್ದರೆ ಅಂಬೇಡ್ಕರ್ ಹುಟ್ಟುತ್ತಿದ್ದರೆ?]

chamarajanagar

ಕೆಲವರು ಕಲ್ಲು ತೂರಾಟ ನಡೆಸಿದರೆ ಮತ್ತೆ ಕೆಲವರು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರಿಂದ ಸುಮಾರು 20 ಅಂಗಡಿಗಳು ಬೆಂಕಿಗಾಹುತಿಯಾಗಿದೆ. ಕಲ್ಲು ತೂರಾಟದಿಂದ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಗಲವಾಡಿ ಮತ್ತು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. [ವಿಶ್ವದೆಲ್ಲೆಡೆ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಸಾಧನೆ ಮೆಲುಕು]

ನಿಷೇಧಾಜ್ಞೆ ಜಾರಿ : ಎರಡು ಗುಂಪುಗಳನ್ನು ಪೊಲೀಸರು ಅಶ್ರುವಾಯು ಸಿಡಿಸಿ ಚದುರಿಸಿದ್ದು, ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಈಗಾಗಲೇ ಗ್ರಾಮದಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಗ್ರಾಮದ ಕೆಲವರು ಅಂಬೇಡ್ಕರ್ ಫ್ಲೆಕ್ಸ್‌ಗೆ ಪೂಜೆ ಸಲ್ಲಿಸಿ, ಬಿಗಿ ಭದ್ರೆತೆಯಲ್ಲಿ ಅದನ್ನು ಗ್ರಾಮ ಪಂಚಾಯಿತಿ ಆವರಣದಲ್ಲಿಟ್ಟಿದ್ದಾರೆ. ಗ್ರಾಮದಲ್ಲಿ ನಡೆದ ಘಟನೆ ಕುರಿತು ವರದಿ ಮಾಡಲು ಹೋದ ಮಾಧ್ಯಮದವರ ಮೇಲೂ ಹಲ್ಲೆ ನಡೆಸಲಾಗಿದೆ.

ಜಿಲ್ಲಾಧಿಕಾರಿ ಬಿ.ರಾಮು, ಉಪ ವಿಭಾಗಾಧಿಕಾರಿ ಕವಿತ, ತಹಸೀಲ್ದಾರ್ ಮಹದೇವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಶಾಂತಿಯನ್ನು ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

English summary
More than 10 people were injured, several shops and vehicles were damaged in Honganuru village of Chamarajanagar during the protest against the desecration of a picture of B.R.Ambedkar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X