ಪತ್ರಿಕೆ ಹಗರಣ : ಇಬ್ಬರು ಶಿಕ್ಷಕರು 9 ದಿನಗಳ ಕಾಲ ಸಿಐಡಿ ವಶಕ್ಕೆ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 07 : ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಶಿಕ್ಷಕರನ್ನು ಸಿಐಡಿ ವಶಕ್ಕೆ ನೀಡಲಾಗಿದೆ. ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಅಂಚೆ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆ ನಡೆಸಿದೆ.

ಸಿಐಡಿ ಅಧಿಕಾರಿಗಳು ಬುಧವಾರ ಬೆಂಗಳೂರಿನ ಸದಾಶಿವ ನಗರದ ಪೂರ್ಣಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಕ ಅನಿಲ್, ಮತ್ತಿಕೆರೆ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಸತೀಶ್ ಅವರನ್ನು ಬಂಧಿಸಿದ್ದರು. ಗುರುವಾರ ಅವರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. [ಪತ್ರಿಕೆ ಸೋರಿಕೆ, ಆರೋಪಿಗಳು ಏ.13ರ ತನಕ ಸಿಐಡಿ ವಶಕ್ಕೆ]

puc

ಸಿಐಡಿ ಸತೀಶ್ ಮತ್ತು ಅನಿಲ್ ವಿಚಾರಣೆ ನಡೆಸಬೇಕು. ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿತು. ಮನವಿ ಪುರಸ್ಕರಿಸಿದ ಕೋರ್ಟ್ ಆರೋಪಿಗಳನ್ನು 9 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿ ಆದೇಶ ನೀಡಿತು. [ಪಿಯು ಪತ್ರಿಕೆ ಖರೀದಿ ಆಗಿದೆ, ಮಾರಿದವರು ಯಾರು?]

ಎಲ್ಲಾ ಆರೋಪಿಗಳು ಸಿಐಡಿ ವಶಕ್ಕೆ : ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಂಗಳೂರಿನ ನಾಗರಬಾವಿಯ ಆದರ್ಶನಗರದ ಮಂಜುನಾಥ್, ಶ್ರೀರಾಮಪುರದ ಓಬಳರಾಜು, ಹಾಗೂ ಮಲ್ಲೇಶ್ವರದ ಪಶ್ಚಿಮ ಪಾರ್ಕ್ ರಸ್ತೆಯ ರುದ್ರಪ್ಪ ಅವರನ್ನು ಬಂಧಿಸಲಾಗಿತ್ತು. [ಲೀಕಾಗಿದ್ದ ಕೆಮಿಸ್ಟ್ರಿ ಪಿಯು ಪ್ರಶ್ನೆ ಪತ್ರಿಕೆ ಬೆಲೆ 10 ಲಕ್ಷ ರು!]

ಈ ಮೂವರು ಆರೋಪಿಗಳನ್ನು ಏ.13ರ ತನಕ ಸಿಐಡಿ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿತ್ತು. ಸದ್ಯ, ಇಬ್ಬರು ಆರೋಪಿಗಳನ್ನು ಸಿಐಡಿ ವಶಕ್ಕೆ ನೀಡಲಾಗಿದೆ. ಒಟ್ಟಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲಾ ಆರೋಪಿಗಳು ಸಿಐಡಿ ವಶದಲ್ಲಿದ್ದಾರೆ.

ಅಂಚೆ ಇಲಾಖೆ ಅಧಿಕಾರಿಗಳ ವಿಚಾರಣೆ : ಪತ್ರಿಕೆ ಸೋರಿಕೆ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಗುರುವಾರ ಬೆಂಗಳೂರು, ತುಮಕೂರು ಮತ್ತು ಮೈಸೂರಿನಲ್ಲಿ ಅಂಚೆ ಇಲಾಖೆ ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
2nd PUC Chemistry paper leak : Satish and Anil were sent to 9 days CID custody by Bengaluru 1st ACMM court on April 7, 2016. On Wednesday CID police arrested them in Bengaluru.
Please Wait while comments are loading...