ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ-ಗಣೇಶ, ಬಕ್ರೀದ್ ಹಬ್ಬ : ಪೊಲೀಸರೊಂದಿಗೆ ಸಿದ್ದರಾಮಯ್ಯ ಸಭೆ

|
Google Oneindia Kannada News

ಬೆಂಗಳೂರು, ಅ.22 : ಗೌರಿ-ಗಣೇಶ ಮತ್ತು ಬಕ್ರೀದ್ ಹಬ್ಬ ಏಕಕಾಲಕ್ಕೆ ಬಂದಿದೆ. ಆದ್ದರಿಂದ, ಬಿಗಿ ಪೊಲೀಸ್ ಬಂದೋಬಸ್ತ್ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಸರ್ಜನೆ ಬಳಿಕ ಗಿಡವಾಗಿ ಬೆಳೆಯಲಿದ್ದಾನೆ ಪರಿಸರ ಸ್ನೇಹಿ ಗಣಪ!ವಿಸರ್ಜನೆ ಬಳಿಕ ಗಿಡವಾಗಿ ಬೆಳೆಯಲಿದ್ದಾನೆ ಪರಿಸರ ಸ್ನೇಹಿ ಗಣಪ!

ಗೃಹ ಖಾತೆಯನ್ನು ತಮ್ಮ ಬಳಿ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಸಂಜೆ ಹಿರಿಯ ಪೊಲೀಸ್ ಆಧಿಕಾರಿಗಳ ಸಭೆ ನಡೆಸಿದರು.

CM reviews police security for Gowri-Ganesha festival and Bakrid.

'ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಣ್ಣ ಅಹಿತಕರ ಘಟನೆಗಳನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಲಾಭ ಪಡೆಯಲು ಕೆಲವರು ಪ್ರಯತ್ನ ಮಾಡಬಹುದು. ಅಂತಹ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು' ಎಂದು ನಿರ್ದೇಶನ ನೀಡಿದರು.

ಗೃಹ ಸಚಿವರಾಗಿ ರಮಾನಾಥ ರೈ: ಇನ್ನೇನು ಅಧಿಕೃತ ಘೋಷಣೆ?ಗೃಹ ಸಚಿವರಾಗಿ ರಮಾನಾಥ ರೈ: ಇನ್ನೇನು ಅಧಿಕೃತ ಘೋಷಣೆ?

ಸಿದ್ದರಾಮಯ್ಯ ಪೊಲೀಸರಿಗೆ ನೀಡಿದ ಸೂಚನೆಗಳು

* ಗಣಪತಿ ಪ್ರತಿಷ್ಠಾಪನೆ, ಮರವಣಿಗೆ, ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಬೇಕು.

* ಗೌರಿ-ಗಣೇಶ, ಬಕ್ರೀದ್ ಹಬ್ಬ ಏಕಕಾಲದಲ್ಲಿ ಆಚರಿಸುವುದರಿಂದ ಶಾಂತಿ ಕದಡಬಹುದಾದ ಸಮಾಜ ಘಾತಕ ವ್ಯಕ್ತಿಗಳನ್ನು ಗುರುತಿಸಬೇಕು. ಅವರ ಚಲನವಲನದ ಮೇಲೆ ನಿಗಾ ಇಡಬೇಕು.

* ಹಬ್ಬದ ಆಚರಣೆ ವೇಳೆ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು. ತಮ್ಮ ಅಧೀನದ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯದ ಮೇಲಿರುವಂತೆ ನೋಡಿಕೊಳ್ಳಬೇಕು.

* ಆಯಾ ಜಿಲ್ಲೆಯ ಕಮೀಷನರೇಟ್ ಉಸ್ತುವಾರಿ ಹೊಂದಿರುವ ಅಧಿಕಾರಿಗಳು ಆಗಾಗ ಮೇಲ್ವಿಚಾರಣೆ ನಡೆಸಬೇಕು‌ ಎರಡೂ ಹಬ್ಬಗಳು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕು.

* ಗಣಪತಿ ವಿಸರ್ಜನೆ ವೇಳೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು. ಕೆರೆ, ನದಿಯಲ್ಲಿ ಗಣಪತಿ ವಿಸರ್ಜಿಸುವಾಗ ಜೀವರಕ್ಷಕ ಸಾಧನಗಳು ಇರಬೇಕು.

* ಹಬ್ಬದ ವೇಳೆ ಪೊಲೀಸ್ ಗಸ್ತು ಸಹ ಬಿಗಿಯಾಗಿರಬೇಕು. ಮತೀಯ ಶಕ್ತಿಗಳ ಮೇಲೂ ಕಣ್ಣಿಡಬೇಕು. ಎಲ್ಲೆಡೆ ಶಾಂತಿ ಸಭೆಗಳನ್ನು ನಡೆಸಬೇಕು. ಉಸ್ತುವಾರಿ ಎಡಿಜಿಪಿಗಳು ತಮಗೆ ನಿಗದಿಪಡಿಸಿರುವ ಜಿಲ್ಲೆಗಳಿಗೆ ಭೇಟಿ ಕೊಡಬೇಕು.

English summary
Karnataka Chief Minister Siddaramaiah on Monday, August 21, 2017 reviewed the preparations of the state police to ensure law and order during the upcoming Gowri-Ganesha festival and Bakrid.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X