ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಮೇಶ್ವರ ಜೊತೆ ಸಿಎಂ ಸಿದ್ದರಾಮಯ್ಯ ಗೌಪ್ಯ ಚರ್ಚೆ!

|
Google Oneindia Kannada News

ಬೆಂಗಳೂರು, ಫೆ. 27 : ದಲಿತ ಸಿಎಂ ಚರ್ಚೆ ಕರ್ನಾಟಕದ ರಾಜಕೀಯ ವಲಯದಲ್ಲಿ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿದ್ದಾರೆ. ಗುರುವಾರ ರಾತ್ರಿ ಈ ಮಹತ್ವದ ಬೆಳವಣಿಗೆ ನಡೆದಿದೆ.

ಗುರುವಾರ ರಾತ್ರಿ 8.30ರ ಸುಮಾರಿಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ ಅವರು ಭೇಟಿಯಾಗಿ ಸುಮಾರು 2 ಗಂಟೆ ಚರ್ಚೆ ನಡೆಸಿದ್ದಾರೆ. ಪರಮೇಶ್ವರ ಅವರು ದೆಹಲಿಯಿಂದ ಮರಳಿದ ಬಳಿಕ ನಡೆದ ಈ ಮಾತುಕತೆ ಕುತೂಹಲ ಮೂಡಿಸಿದೆ. [ದಲಿತ ಸಿಎಂ, ಚರ್ಚೆಗೆ ತೆರೆ ಎಳೆದ ದಿಗ್ವಿಜಯ್]

Parameshwar

ಕರ್ನಾಟಕದ ರಾಜಕೀಯ ವಲಯದಲ್ಲಿ ದಲಿತರಿಗೆ ಸಿಎಂ ಪಟ್ಟ ನೀಡಬೇಕು ಎಂಬ ಬೇಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಮೇಶ್ವರ ಅವರನ್ನು ಸಿಎಂ ಮಾಡಬೇಕು ಎಂದು ದಲಿತ ಸಂಘಟನೆಗಳು ಬೇಡಿಕೆ ಇಟ್ಟಿದ್ದು, ಈ ಕುರಿತು ರಾಜ್ಯಾದ್ಯಂತ ಜನಾಂದೋಲನ ಆರಂಭಿವೆ. [ದಲಿತ ಸಿಎಂ ಚರ್ಚೆ ಹುಟ್ಟುಹಾಕಿದ ಸಂಘಟನೆಗಳು]

ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪರಮೇಶ್ವರ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಾಕಿ ಉಳಿದಿರುವ ನಿಗಮ-ಮಂಡಳಿಗಳಿಗೆ ನೇಮಕ ಮಾಡುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಗೌಪ್ಯವಾಗಿ ಚರ್ಚೆ ನಡೆಸಿದ್ದಾರೆ. [ದಲಿತರಿಗೆ ಸಿಎಂ ಪಟ್ಟ, ಮೌನ ಮುರಿದ ಪರಮೇಶ್ವರ]

ದಲಿತ ಸಿಎಂ ವಿಚಾರದಲ್ಲಿ ದಲಿತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸಿ ಎಂದು ತಾವು ಹೇಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಲವಾರು ಸಚಿವರು ಈ ಕುರಿತು ಹೇಳಿಕೆ ನೀಡುತ್ತಿರುವ ಹಿನ್ನಲೆಯಲ್ಲಿ ಉಭಯ ನಾಯಕರ ಭೇಟಿ ಕುತೂಹಲ ಹುಟ್ಟುಹಾಕಿದೆ.

English summary
Chief Minister Siddaramaiah on Thursday night met Karnataka Pradesh Congress Committee president Dr.G. Parameshwar in private hotel in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X