ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದು, ಅಂಬಿ ವಿರುದ್ಧ ಕಾಂಗ್ರೆಸಿಗರಿಂದಲೇ ಮಸಲತ್ತು!

|
Google Oneindia Kannada News

ಬೆಂಗಳೂರು, ಡಿ. 11 : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಸತಿ ಸಚಿವ ಅಂಬರೀಶ್ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರೇ ಹೈಕಮಾಂಡ್‌ಗೆ ದೂರು ನೀಡಿದ್ದಾರೆ. ಅಂಬರೀಶ್ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರೆ, ಸಿಎಂ ವಿರುದ್ಧ 25ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ದೂರು ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೂಲ ಕಾಂಗ್ರೆಸಿಗರನ್ನು ನಿರ್ಲಕ್ಷಿಸಿ ಜೆಡಿಎಸ್‌ನಿಂದ ಬಂದವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 25ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ಮತ್ತು ಮುಖಂಡರು ಹೈಕಮಾಂಡ್‌ಗೆ ದೂರು ನೀಡಿದ್ದಾರೆ. [ನಮಗೂ ಸ್ವಲ್ಪ ರಾಜಕೀಯ ಗೊತ್ತಿದೆ ಅಂದ್ರು ಅಂಬರೀಶ್]

Siddaramaiah, Ambareesh

ಹಿರಿಯ ನಾಯಕ ಶಂಕರ್‌ ಮುನವಳ್ಳಿ ನೇತೃತ್ವದಲ್ಲಿ ಸುಮಾರು 25 ಮಂದಿ ಪ್ರಮುಖ ನಾಯಕರು ಸಹಿ ಹಾಕಿರುವ ದೂರು ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್‌ಗಾಂಧಿ, ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮ್ಮದ್ ಪಟೇಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.[ಸಂಪುಟ ಸಭೆಗೆ ಅಂಬರೀಶ್ ಗೈರು]

ವಸತಿ ಸಚಿವ ಅಂಬರೀಶ್ ವಿರುದ್ಧ ದೂರು : ಮಂಡ್ಯ ಜಿಲ್ಲಾ ಕಾಂಗ್ರೆಸ್ ಭಿನ್ನಮತ ಮತ್ತೊಮ್ಮೆ ಬಹಿರಂಗಗೊಂಡಿದ್ದು, ವಸತಿ ಸಚಿವ ಅಂಬರೀಶ್ ವಿರುದ್ಧ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಹಿಂದ ಯುವ ವೇದಿಕೆ ಸದಸ್ಯರು ಹೈಕಮಾಂಡ್‍ಗೆ ದೂರು ನೀಡಿದ್ದಾರೆ. [ಅಂಬರೀಷ್- ಮೀರ್ ಸಾದಿಕ್, ಹೆಣ್ಣು ವಿರೋಧಿ]

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಸ್ಥಳೀಯ ಕಾರ್ಯಕರ್ತರ ಜೊತೆ ಬಾರ್‌ಗಳಲ್ಲಿ ಕುಣಿದು ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ವಿಡಿಯೋಗಳು ವಾಟ್ಸಪ್‍ನಲ್ಲಿ ಹರಿದಾಡುತ್ತಿದೆ. ಅಂಬರೀಶ್ ಸಚಿವ ಸಂಪುಟ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ.

ಈ ಪತ್ರವೂ ಸಹ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ದಿಗ್ವಿಜಯ್ ಸಿಂಗ್ ಅವರಿಗೆ ಹೋಗಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೊಮ್ಮೆ ಇದರಿಂದ ಗೊತ್ತಾಗಿದೆ.

English summary
Congress former MLAs have sent a letter to party high command expressing their unhappiness about CM Siddaramaiah. Mandya Congress leaders also compliant to high command against housing minister Ambareesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X