ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸಮರ್ಥ ಸಚಿವರನ್ನು ಕೈಬಿಡಿ, ಹೊಸಬರಿಗೆ ಅವಕಾಶ ಕೊಡಿ

|
Google Oneindia Kannada News

ಬೆಂಗಳೂರು, ಜುಲೈ 23 : ಮುಂಗಾರು ಅಧಿವೇಶನ ಮುಗಿಯುತ್ತಾ ಬಂದಂತೆ ಸಚಿವ ಸಂಪುಟ ಪುನಾರಚನೆ ಮಾತುಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮರ್ಥ ಸಚಿವರನ್ನು ಕೈ ಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿ ಎಂದು ಶಾಸಕರು ಒತ್ತಾಯಿಸ ತೊಡಗಿದ್ದಾರೆ.

ಲೋಕಸಭೆ ಚುನಾವಣೆ ನಂತರ, ದಸರಾ ನಂತರ, ಗ್ರಾಮ ಪಂಚಾಯಿತಿ ಚುನಾವಣೆ ನಂತರ, ಬಿಬಿಎಂಪಿ ಚುನಾವಣೆ ನಂತರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಯನ್ನು ಮುಂದೂಡುತ್ತಲೇ ಬರುತ್ತಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ.[ಬಿಬಿಎಂಪಿ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಕಸರತ್ತು]

cabinet expansion

ಸಿದ್ದರಾಮಯ್ಯ ಅವರ ಈ ವರ್ತನೆಯಿಂದ ಅಸಮಾಧಾನಗೊಂಡಿರುವ ಶಾಸಕರು ತಕ್ಷಣ ಸಂಪುಟ ಪುನಾರಚನೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಹೈಕಮಾಂಡ್ ನಾಯಕರಿಗೂ ಮನವಿ ಮಾಡಲು ನಿರ್ಧರಿಸಿದ್ದಾರೆ. ಶುಕ್ರವಾರ ಮುಂಗಾರು ಅಧಿವೇಶನ ಅಂತ್ಯಗೊಳ್ಳುತ್ತಿದ್ದಂತೆ ಈ ಕುರಿತ ಚಟುವಟಿಕೆಗಳಿಗೆ ಚಾಲನೆ ದೊರೆಯುವ ಸಾಧ್ಯತೆ ಇದೆ. ['ಏನು ಆಗ್ಬೇಕೋ ಅದು ಆಗುವ ಸಮಯಕ್ಕೆ ಆಗುತ್ತೆ']

ಈಗಾಗಲೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿರಿಯ ಶಾಸಕರಾದ ಎ.ಮಂಜು, ಮಾಲೀಕಯ್ಯ ಗುತ್ತೇದಾರ್ ಮುಂತಾದವರು ಸಚಿವ ಸಂಪುಟ ಪುನಾರಚನೆ ಮಾಡಿ ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಅಸಮರ್ಥ ಸಚಿವರನ್ನು ಕೈ ಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. [ಖಾತೆಯೂ ಬದಲಾಗಬಹುದು, ವ್ಯಕ್ತಿಯೂ ಬದಲಾಗಬಹುದು]

ಇಂದು ಬೆಂಗಳೂರಿಗೆ ರಾಹುಲ್ ಗಾಂಧಿ : ಶುಕ್ರವಾರ ಅನಂತಪುರಕ್ಕೆ ತೆರಳಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಸಂಜೆ 7.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಬಿಬಿಎಂಪಿ ಚುನಾವಣೆ ಮುಂದಿದೆ : ಶಾಸಕರು ಎಷ್ಟೇ ಒತ್ತಡ ತಂದರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮುಗಿಯುವ ತನಕ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಕಡಿಮೆ ಇದೆ.

ಅಧಿವೇಶನ ಮುಗಿಯುತ್ತಿದ್ದಂತೆ ಬಿಬಿಎಂಪಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಾಯಕರು ತೊಡಗಿಸಿಕೊಳ್ಳಲಿದ್ದಾರೆ. ಆಗಸ್ಟ್ 22ರಂದು ಚುನಾವಣೆ ನಡೆಯಲಿದ್ದು, 25ರಂದು ಫಲಿತಾಂಶ ಹೊರಬೀಳಲಿದೆ. ನಂತರ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ.

English summary
Karnataka senior Congress MLAs demands for a cabinet reshuffle. Chief minister Siddaramaiah may take decision after BBMP polls scheduled on August 22, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X